
Mysterious explosion at home in Hassan : ಹಾಸನ ಜಿಲ್ಲೆಯ ಹಳೇಆಲೂರು ಪಟ್ಟಣದ ಒಂದು ನಿವಾಸದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ (Mysterious explosion) ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ಮೃತರನ್ನು SUDARSHAN (32) ಮತ್ತು ಅವರ ಪತ್ನಿ KAVYA (27) ಎಂದು ಗುರುತಿಸಲಾಗಿದೆ. ಸ್ಫೋಟದಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣವೇ ಹಾಸನದ Himes Hospital ಗೆ ದಾಖಲಿಸಿದ್ದರು. ಅವರ ಸ್ಥಿತಿ ಚಿಂತಾಜನಕವಾಗಿದ್ದರಿಂದ Zero Traffic ವ್ಯವಸ್ಥೆ ಮೂಲಕ ಬೆಂಗಳೂರಿನ Victoria Hospital ಗೆ ತುರ್ತುವಾಗಿ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ.
ಈ ಘಟನೆಯಿಂದಾಗಿ ಹದಿನಾಲ್ಕು ತಿಂಗಳ ಮಗು ಅನಾಥವಾಗಿದೆ. ಸೋಮವಾರ ರಾತ್ರಿ ಸುಮಾರು 8.30ಕ್ಕೆ ಸ್ಫೋಟ ಸಂಭವಿಸಿದ್ದು, ಘಟನೆಗೆ ಮೂಲ ಕಾರಣ ಇನ್ನೂ ತಿಳಿದುಬಂದಿಲ್ಲ.




