
MALLIKARJUNA KHARGE : ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ (AICC President) ಮಲ್ಲಿಕಾರ್ಜುನ ಖರ್ಗೆ ಅವರು ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಎಸ್. ರಾಮಯ್ಯ (M.S. Ramaiah Hospital) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ವೈದ್ಯಕೀಯ ತಪಾಸಣೆಯ ಬಳಿಕ ಅವರ ಆರೋಗ್ಯದಲ್ಲಿ ಯಾವುದೇ ಗಂಭೀರ ತೊಂದರೆಯಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಖರ್ಗೆ ಅವರು ಸದ್ಯ M.S. Ramaiah Hospital ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಖರ್ಗೆ ಅವರ ಕುಟುಂಬ ಹಾಗೂ ಆಸ್ಪತ್ರೆ ಮೂಲಗಳು ಸ್ಪಷ್ಟಪಡಿಸಿವೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖರ್ಗೆ ಅವರು ಕಲಬುರಗಿಯಲ್ಲಿ ಏರ್ಪಡಿಸಿದ್ದ ಭೇಟಿಯನ್ನು ರದ್ದುಗೊಳಿಸಿ, ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಅದೇ ಸಂದರ್ಭದಲ್ಲೇ ಉಸಿರಾಟದಲ್ಲಿ ಸ್ವಲ್ಪ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣವೇ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರ ತಂಡ ಸಂಪೂರ್ಣ ತಪಾಸಣೆ ನಡೆಸಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದೆ.




