
Building collapse in chennai : ತಮಿಳುನಾಡಿನ ಚೆನ್ನೈ ಸಮೀಪದ ತಿರುವಳ್ಳೂರ್ ಜಿಲ್ಲೆಯ ಎಣ್ಣೋರ್ ಥರ್ಮಲ್ ಪವರ್ ಸ್ಟೇಷನ್ನಲ್ಲಿ (Ennore Thermal Power Station) ಭೀಕರ ದುರ್ಘಟನೆ ಸಂಭವಿಸಿದ್ದು, ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದ ಪರಿಣಾಮ 9 ಮಂದಿ ದುರ್ಮರಣ ಹೊಂದಿದ್ದಾರೆ.
ಇನ್ನು ಈ Building Collapses ನಲ್ಲಿ ಸ್ಥಳದಲ್ಲಿಯೇ 4 ಮಂದಿ ಮೃತಪಟ್ಟಿದ್ದು, ಗಾಯಗೊಂಡವರನ್ನು ತಕ್ಷಣವೇ Stanley Hospital ಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಇನ್ನೂ 5 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 9ಕ್ಕೆ ಏರಿದೆ.
ಇನ್ನು ಘಟನಾ ಸ್ಥಳದಲ್ಲಿ ತುರ್ತು ಸೇವೆಗಳು ಕಾರ್ಯನಿರತವಾಗಿದ್ದು, ಧ್ವಂಸಾವಶೇಷಗಳಡಿ ಇನ್ನೂ ಕೆಲವರು ಸಿಕ್ಕಿಹಾಕಿಕೊಂಡಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಈ ಘಟನೆ ಕುರಿತು ತನಿಖೆ ಪ್ರಾರಂಭವಾಗಿದೆ.




