
IND VS WI Test 2025: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಬಹು ನಿರೀಕ್ಷಿತ ಟೆಸ್ಟ್ ಸರಣಿ ಅಕ್ಟೋಬರ್ 2ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra modi stadium) ಆರಂಭವಾಗಲಿದೆ. ಟೀಮ್ ಇಂಡಿಯಾ(Team India) ಈ ಪಂದ್ಯಕ್ಕೆ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ ಎಂದು ಅಂದಾಜಿಸಲಾಗಿದೆ.
ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಅವರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಯುವ ಆಟಗಾರ ಸಾಯಿ ಸುದರ್ಶನ್ ಅವಕಾಶ ಪಡೆಯಲಿದ್ದು, ನಾಯಕ ಶುಭ್ಮನ ಗಿಲ್ ಅವರು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಮೋಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಹಾಗೂ ಜಡೇಜಾ ಪ್ರಮುಖ ಪಾತ್ರವಹಿಸಲಿದ್ದಾರೆ ಎನ್ನಲಾಗಿದೆ. ಇತ್ತೀಚಿನ ಫಾರ್ಮ್ ಮತ್ತು ಸ್ಥಾನಮಾನವನ್ನು ಅವಲೋಕಿಸಿದರೆ, ಟೀಮ್ ಇಂಡಿಯಾ (Team India) ಈ ಸರಣಿಯಲ್ಲಿ ಸ್ಪಷ್ಟ ಫೇವರಿಟ್ (favorite) ಆಗಿ ಪರಿಣಮಿಸಿದೆ. West Indies Team ಯುವ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿರುವುದು ಭಾರತಕ್ಕೆ ಸೆಣೆಸಾಟ ನೀಡಲಿದೆ.




