
KARNATAKA WEATHER REPORT TODAY : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಾಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಹಗುರ ಮಳೆಯ ನಿರೀಕ್ಷೆ ಇದ್ದರೆ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಬಿರುಗಾಳಿ ಬೀಸುವ ಸಂಭವವಿದೆ.
ಉತ್ತರ ಒಳನಾಡಿನಲ್ಲಿ ಮಳೆ ನಿರೀಕ್ಷೆ ಇರುವ ಜಿಲ್ಲೆಗಳು:
ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮಳೆಯ ಲಕ್ಷಣ:
ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಹಾಗೂ ಸುತ್ತಮುತ್ತ:
ಮುಂದಿನ 48 ಗಂಟೆಗಳವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 20°C ಆಗುವ ನಿರೀಕ್ಷೆ ಇದೆ.




