ಅರಸೀಕೆರೆಯಲ್ಲಿ ಹೇಗಿತ್ತು ಗೊತ್ತಾ ?ಗಾಂಧಿ ಜಯಂತಿಯ ಸಂಭ್ರಮ...

ಇಂದು ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನ ಅದ್ದೂರಿಯಾಗಿ ಆಚರಿಸಲಾಗ್ತ ಇದೆ. ಇತ್ತ ಅರಸೀಕೆರೆ ನಗರದ ಹೊರವಲಯದ ಮೈಸೂರು ರಸ್ತೆಯಲ್ಲಿರುವ ಇರುವ ಕಸ್ತೂರಬಾ ಗಾಂಧಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಹಾಗೂ ಕಸ್ತೂರಬಾ ಗಾಂಧಿ ರಾಷ್ಟ್ರೀಯ ಸ್ಮಾರಕದ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಇನ್ನು ಕಾರ್ಯಕ್ರಮದಲ್ಲಿ ಕರ್ನಾಟಕ ಗೃಹಮಂಡಳಿ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಶಾಸಕರಾ ಕೆ.ಎಂ ಶಿವಲಿಂಗೇಗೌಡ ಭಾಗವಹಿಸಿ, ಗಾಂಧೀಜಿ ಹಾಗೂ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದ್ರು. ಈ ವೇಳೆ ಶಾಸಕ ಶಿವಲಿಂಗೇಗೌಡ ಅವ್ರು ಮಾತನಾಡಿ, ನಮ್ಮ ದೇಶದ ಇತಿಹಾಸವನ್ನು ತಿಳಿದುಕೊಳ್ಳೋದು ಇಂದಿನ ಪೀಳಿಗೆಗೆ ಅವಶ್ಯಕತೆ ಇದೆ, ಮಹಾತ್ಮ ಗಾಂಧೀಜಿ ಅವ್ರು ಭಾರತದ ಸ್ವಾತಂತ್ರಕ್ಕೋಸ್ಕರ ಪಟ್ಟ ಶ್ರಮ, ಕೊಡುಗೆ ಅಪಾರವಾದದ್ದು, ಅಂತಹ ಮಹನೀಯರ ಆದರ್ಶಗಳ ಮತ್ತು ತತ್ವಗಳನ್ನ ಅಳವಡಿಸಿಕೊಂಡು ಮುಂದುವರಿಸೋದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.
ಇನ್ನ ಕಾರ್ಯಕ್ರಮದಲ್ಲಿ ಅರಸೀಕೆರೆ ತಹಸೀಲ್ದಾರ್ ಎಂ.ಜಿ. ಸಂತೋಷ್ ಕುಮಾರ್, ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ಗೀಜಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಾ ಶಿವಕುಮಾರ್, ಅನಂತ ಇಂಟರ್ ನ್ಯಾಷನಲ್ ಸಂಸ್ಥೆಯ ಅಧ್ಯಕ್ಷ ಅನಂತ ಕುಮಾರ್, ಶಿಶು ಅಭಿವೃದ್ಧಿ ಅಧಿಕಾರಿ ಯೋಗೀಶ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಜರಿದ್ರು.




