
Son kills mother after getting drunk in Hassan : ಅಡುಗೆ ಮಾಡದ ವಿಚಾರಕ್ಕೆ ತಾಯಿ ಮತ್ತು ಮಗನ ನಡುವೆ ಉಂಟಾದ ತೀವ್ರ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾಸನದ ಆಲೂರು ಹೋಬಳಿಯ ಕದಾಳುಚನ್ನಾಪುರ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರೇಮ (45) ಎನ್ನಲಾಗಿದ್ದು, ಆರೋಪಿಯನ್ನು ಅವರ ಮಗ ಸಂತೋಷ್ (19). ನೆನ್ನೆ ರಾತ್ರಿ ಸಂಪೂರ್ಣ ಮದ್ಯಪಾನ ಮಾಡಿ ಮನೆಗೆ ಬಂದ ಸಂತೋಷ್, ತಾಯಿ ಅಡುಗೆ ಮಾಡಿಲ್ಲವೆಂದು ಆಕ್ರೋಶಗೊಂಡಿದ್ದ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದ್ದು, ಆಕ್ರೋಶಗೊಂಡ ಸಂತೋಷ್ ತಾಯಿಯ ತಲೆಗೆ ದೊಣ್ಣೆಯಿಂದ ಬಲವಾಗಿ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದ. ತೀವ್ರ ಗಾಯಗೊಂಡಿದ್ದ ಪ್ರೇಮ ಅವರನ್ನು ತುರ್ತು ಚಿಕಿತ್ಸೆಗಾಗಿ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಸಂತೋಷ್ನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.




