ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ನಡೆದಿದೆ.

ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಅಚೇಪಲ್ಲಿ ಗ್ರಾಮದ 14 ವರ್ಷದ ವಿಷ್ಣು, 12 ವರ್ಷದ ನಿಹಾಲ್ ರಾಜ್ ಹಾಗೂ 16 ವರ್ಷದ ಹರ್ಷವರ್ಧನ್ ಎನ್ನಲಾಗಿದೆ. ಅಂದಹಾಗೆ ಶಾಲೆಗಳಿಗೆ ದಸರಾ ರಜೆ ಹಿನ್ನಲೆಯಲ್ಲಿ ಬಾಲಕರು ಕೆರೆಯಲ್ಲಿ ಈಜಾಡಲು ತೆರಳಿದ್ರು. ಮೊದಲಿಗೆ ವಿಷ್ಣು ಹಾಗೂ ನಿಹಾಲ್ ರಾಜ್ ಈಜಾಡಲು ತೆರಳಿದ್ದು, ನೀರಿನಲ್ಲಿ ಮುಳುಗುತ್ತಿದ್ದವರ ರಕ್ಷಣೆಗೆ ಹರ್ಷವರ್ಧನ್ ಮುಂದಾಗಿದ್ದಾನೆ ಎನ್ನಲಾಗಿದೆ. ಮೂವರು ಕೂಡ ಹೊರಬರಲಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತರನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಮೂವರ ಬಾಲಕರ ಮೃತದೇಹಗಳನ್ನ ರವಾನೆ ಮಾಡಲಾಗಿದೆ. ಆಸ್ಪತ್ರೆಗೆ ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸ್ವಾಂತಾನ ಹೇಳಿದ್ದು ವೈಯುಕ್ತಕವಾಗಿ 1 ಲಕ್ಷ ರೂಪಾಯಿ ಪರಿಹಾರ ನೀಡವುದಾಗಿ ಭರವಸೆ ನೀಡಿದ್ದಾರೆ. ಸಿಎಂ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸುವ ಭರವಸೆ ಕೊಟ್ಟಿದ್ದಾರೆ.




