
Mysuru Car and Tipper Accident : ಮೈಸೂರಿನ ಹುಣಸೂರು ತಾಲ್ಲೂಕಿನ ಚಿಲ್ಕುಂದ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಮೃತ ವ್ಯಕ್ತಿಯನ್ನು ಸರಗೂರು ತಾಲ್ಲೂಕಿನ ತುಂಬಸೋಗೆ ಗ್ರಾಮದ ಮಲ್ಲಿಕಾರ್ಜುನ (Mallikarjuna) ಎಂದು ಗುರುತಿಸಲಾಗಿದೆ. ಗಾಯಗೊಂಡವರು ಚೇತನ್ ಮತ್ತು ಶಮಂತ್ ಎಂಬವರಾಗಿದ್ದು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರು ಮತ್ತು ಗಾಯಗೊಂಡವರು ಉಪ್ಪನಂಗಡಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಪಿರಿಯಾಪಟ್ಟಣ ಕಡೆದಿಂದ ವೇಗವಾಗಿ ಬರುತ್ತಿದ್ದ ಟಿಪ್ಪರ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರು ರಸ್ತೆಯ ಬದಿಯಲ್ಲಿದ್ದ ಮರಕ್ಕೆ ಕುದ್ದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಇನ್ನು ಅಪಘಾತದ ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.




