
KARNATAKA RAIN ALERT : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು, ಕೆಲವೆಡೆ ಮುಂದಿನ ಎರಡು ದಿನಗಳ ಕಾಲ ಮಳೆ ಆಗುವ ಸಾಧ್ಯತೆಯಿರುವುದರಿಂದ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ಜಾರಿಗೊಳಿಸಿದೆ.
ಇಂದು ಬೀದರ್, ಬೆಳಗಾವಿ, ಕಲಬುರಗಿ, ಯಾದಗಿರಿ, ರಾಯಚೂರು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ Yellow Alert ಘೋಷಿಸಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ನಾಳೆ ರಾಜ್ಯದ ಕೆಲವೆಡೆ ಮಳೆಯ ತೀವ್ರತೆ ಕಡಿಮೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೂ ಬೆಳಗಾವಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಿಗೆ ನಾಳೆಯೂ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ.
ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.




