
India announces squad for series against Australia : ಭಾರತದ ಆಸ್ಟ್ರೇಲಿಯಾ ವಿರುದ್ಧದ ಕ್ರಿಕೆಟ್ ಸರಣಿಗೆ 15 ಸದಸ್ಯರ ತಂಡ ಪ್ರಕಟವಾಗಿದೆ. ಈ ತಂಡವನ್ನು ಶುಭ್ಮನ್ ಗಿಲ್ ನಾಯಕತ್ವ ವಹಿಸಲಿದ್ದಾರೆ, ಮತ್ತು ಉಪನಾಯಕ ನಾಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.
ವಿಶೇಷತೆ ಎಂದರೆ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರು ಆಟಗಾರರು ಮರಳಿದ್ದಾರೆ. ಟಿ20 ಹಾಗೂ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ಈ ಇಬ್ಬರು, ಚಾಂಪಿಯನ್ಸ್ ಟ್ರೋಫಿ ಫೈನಲ್ ನಂತರ ಭಾರತ ತಂಡಕ್ಕೆ ಮರಳಿದ್ದಾರೆ.
ಆರಂಭಿಕನಾಗಿ ಯಶಸ್ವಿ ಜೈಸ್ವಾಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಸೇರಿದ್ದು, ಹೆಚ್ಚುವರಿ ಕೀಪರ್ ಸ್ಥಾನದಲ್ಲಿ ಧ್ರುವ್ ಜುರೆಲ್ ಕೂಡ ಪ್ರವೇಶಿಸಿದ್ದಾರೆ. ಇನ್ನು ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಂಡ ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಮತ್ತು ರವೀಂದ್ರ ಜಡೇಜಾ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.




