HD Devegowda : ಮಾಜಿ ಪ್ರಧಾನಿ ಮತ್ತು ಹಿರಿಯ ರಾಜಕಾರಣಿ ಎಚ್.ಡಿ. ದೇವೇಗೌಡ (H.D DEVEGOWDA) ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಬೆಂಗಳೂರುನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಅನಾರೋಗ್ಯ
ಮಾಜಿ ಪ್ರಧಾನಿ ಮತ್ತು ಹಿರಿಯ ರಾಜಕಾರಣಿ ಎಚ್.ಡಿ. ದೇವೇಗೌಡ (H.D DEVEGOWDA) ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಬೆಂಗಳೂರುನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ತಕ್ಷಣ ಚಿಕಿತ್ಸೆ ಆರಂಭಿಸಿದ್ದು, ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆಯ ಲಕ್ಷಣಗಳು ಕಾಣಿಸುತ್ತಿವೆ ಎಂಬ ಮಾಹಿತಿ ಲಭಿಸಿದೆ.
ಗೌಡರ ಆರೋಗ್ಯ ಚೇತರಿಕೆ | ಕುಟುಂಬದಿಂದ ಶೀಘ್ರದಲ್ಲೇ ಅಧಿಕೃತ ಮಾಹಿತಿ ನಿರೀಕ್ಷೆ
ಇನ್ನುಆಸ್ಪತ್ರೆಯ ಮೂಲಗಳ ಪ್ರಕಾರ, ದೇವೇಗೌಡರು ವೈದ್ಯಕೀಯ ಚಿಕಿತ್ಸೆ ಗೆ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆಯೆಂದು ಹೇಳಲಾಗಿದೆ. ದೇವೇಗೌಡರಿಗೆ ಏನು ಸಮಸ್ಯೆಯಾಗಿದೆ ಎಂಬುದರ ಬಗ್ಗೆ ಕುಟುಂಬ ಅಥವಾ ಆಸ್ಪತ್ರೆಯಿಂದ ಶೀಘ್ರದಲ್ಲೇ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.
ಇದನ್ನು ನೋಡಿ : ಬರಗೂರು HEADQUARTERS ಆದ್ರು ಸೌಕರ್ಯವಿಲ್ಲದೆ ಜನರ ಪರದಾಟ | NAMMA NADE NEMMOORA KADE | CN HALLI |
ಕಳೆದ ವರ್ಷ 2024ರ ಫೆಬ್ರವರಿ 15ರಂದು ಕೂಡ ದೇವೇಗೌಡರು ತೀವ್ರ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲಿದ ಹಿನ್ನೆಲೆಯಲ್ಲಿ ಇದೇ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಕ್ಷಣದ ಚಿಕಿತ್ಸೆ ಬಳಿಕ ಅವರು ಸಂಪೂರ್ಣವಾಗಿ ಚೇತರಿಸಿಕೊಂಡು ಆಸ್ಪತ್ರೆಯಿಂದ Discharge ಆಗಿದ್ದರು.

92 ವರ್ಷ ವಯಸ್ಸಾದರೂ ರಾಜಕೀಯವಾಗಿ ಸಕ್ರಿಯ
92 ವಯಸ್ಸಾದರೂ, ದೇವೇಗೌಡರು ಇನ್ನೂ ರಾಜಕೀಯವಾಗಿ ಸಕ್ರಿಯರಾಗಿದ್ದು, ರಾಜ್ಯಸಭೆ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಹಾಸನ ಜಿಲ್ಲೆಯಲ್ಲಿ ಪ್ರವಾಸ ನಡೆಸಿದ ಅವರು, ಟ್ರಕ್ ಗಣೇಶ ಮೆರವಣಿಗೆ ದುರಂತದ ನಂತರ ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ನೀಡಲು ಭೇಟಿ ನೀಡಿದ್ದರು. ಜೊತೆಗೆ, ಮುಂದಿನ ಲೋಕಸಭೆ ಚುನಾವಣೆಗೆ ಮೈತ್ರಿ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿ, ಹಲವೆಡೆ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದರು.

ಇವರ ಈ ಮುನ್ನಡೆದ ರಾಜಕೀಯ ಬದ್ಧತೆ ಹಾಗೂ ಜನತೆಯ ಹಿತದತ್ತ ಹೊಂದಿರುವ ನಿಷ್ಠೆ ಶ್ಲಾಘನೀಯ. ಸಾರ್ವಜನಿಕ ಜೀವನದಲ್ಲಿ ಈ ರೀತಿಯ ಹಿರಿಯರ ಅನುಭವವು ರಾಷ್ಟ್ರದ ಆಳ್ವಿಕೆಗೆ ದಿಟ್ಟ ದಾರಿ ತೋರಿಸುತ್ತಿದೆ.
ಇದನ್ನು ಓದಿ : Mysuru Murder : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ Murder In Mysuru




