
CHIKKANAYAKANAHALLI : ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನ ಪ್ರಸಿದ್ದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 75ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ರಾಜ್ಯಮಟ್ಟದ ಭಜನಾ ಸ್ಪರ್ಧೆಗೆ ಆಯೋಜನೆ ಮಾಡಲಾಗಿತ್ತು. ನಿನ್ನೆಯಿಂದ ಭಜನಾ ಕಾರ್ಯಕ್ರಮ ಆರಂಭವಾಗಿದ್ದು, ಹತ್ತು ದಿನಗಳ ಕಾಲ ಭಜನಾ ಕಾರ್ಯಕ್ರಮ ನಡೆಯಲಿದೆ. ಭಜನಾ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಭಜನಾ ತಂಡಗಳು ಭಾಗವಹಿಸುತ್ತಿದ್ದು, ಧಾರ್ಮಿಕ, ಸಾಂಸ್ಕೃತಿಕ ವಾತಾವರಣಕ್ಕೆ ಸಾಕ್ಷಿಯಾಗಲಿದೆ.
ಇನ್ನು ಹುಳಿಯಾರಿನಲ್ಲಿ ಭಜನಾ ಪರಂಪರೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಹಿರಿಯ ಭಜನಾ ಕಲಾವಿದೆ ಶ್ರೀಮತಿ ಪ್ರೇಮಕ್ಕ ಹಾಗೂ ಮುಖ್ಯ ಪ್ರಾಣ ಭಜನಾ ಮಂಡಳಿಯ ಹಿರಿಯ ಕಲಾವಿದ ಗೋಪಾಲ್ ಅವರನ್ನು ಸನ್ಮಾನಿಸಲಾಯ್ತು. ಅಲ್ದೇ ಈ ವೇಳೆ ಹುಳಿಯಾರಿನ ಭಜನಾ ತಂಡಗಳನ್ನು ರಾಜ್ಯ ಮಟ್ಟಕ್ಕೆ ಪರಿಚಯಿಸುವಲ್ಲಿ ಹಾಗೂ ಅನೇಕ ಬಹುಮಾನಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಗೋಪಾಲ್ ಅವರನ್ನ ಶ್ಲಾಘಿಸಲಾಯಿತು.
ಇನ್ನು ಕಾರ್ಯಕ್ರಮದಲ್ಲಿ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯ ಸದಸ್ಯರು, ಭಕ್ತರು ಸೇರಿದಂತೆ ಭಜನಾ ಕಲಾವಿದರು ಉಪಸ್ಥಿತರಿದ್ದರು.




