NIKHIL KUMARASWAMY : ಜಾತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ – ಕಾಂಗ್ರೆಸ್ ನಿರ್ಧಾರಕ್ಕೆ ನಿಖಿಲ್ ಕುಮಾರಸ್ವಾಮಿ ತೀವ್ರ ವಿರೋಧ!

“ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಸರ್ಕಾರ” – ನಿಖಿಲ್
ಎಕ್ಸ್ (ಟ್ವಿಟ್ಟರ್) ನಲ್ಲಿ ನಿಖಿಲ್ ಕುಮಾರಸ್ವಾಮಿ ಮಾಡಿರುವ Post ನಲ್ಲಿ ಅವರು ಸರ್ಕಾರವನ್ನು ಕಿಡಿಕಾರಿದ್ದಾರೆ. “ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ ಸರ್ಕಾರ ಪೂರ್ವ ತಯಾರಿ ಇಲ್ಲದೆ, ಯಾರದ್ದೋ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ಮಾಡುತ್ತಿದೆ. ಜಾತಿ ಗಣತಿ ದಿನದಿಂದ ದಿನಕ್ಕೆ ಗೊಂದಲಮಯವಾಗುತ್ತಿದೆ.”
“ಕೇವಲ 15 ದಿನಗಳಲ್ಲಿ 2 ಕೋಟಿ ಮನೆಗಳಲ್ಲಿ ಸಮೀಕ್ಷೆ ಅಸಾಧ್ಯ”
“2 ಕೋಟಿ ಮನೆಗಳಲ್ಲಿ ವಾಸಿಸುವ 7 ಕೋಟಿ ಜನರನ್ನು ಕೇವಲ 15 ದಿನಗಳಲ್ಲಿ ಸಮೀಕ್ಷೆ ಮಾಡಲು ಸಾಧ್ಯವಿಲ್ಲ ಎಂಬುದು ಸಮೀಕ್ಷೆ ಪ್ರಾರಂಭವಾಗುವ ಮೊದಲುಲೇ ಸ್ಪಷ್ಟವಾ ಗಿತ್ತು.”
ಇದನ್ನು ಓದಿ : Saree Lookನಲ್ಲಿ ಮಿಂಚಿದ ಮಂಗಳೂರಿನ HOT ಬೆಡಗಿ Krithi Shetty

“ಸರ್ಕಾರಿ ಶಾಲಾ ಮಕ್ಕಳಿಗೆ ಏನು ನ್ಯಾಯ?”
ರಜೆ ವಿಸ್ತರಣೆಗೆ ಸಂಬಂಧಿಸಿದಂತೆ ಅವರು ಪ್ರಶ್ನೆ ಎತ್ತಿದ್ದಾರೆ. “ಸರ್ಕಾರಿ ಶಾಲೆಗಳು ದೀಪಾವಳಿಯ ನಂತರವೇ ತೆರೆಯುತ್ತವೆ. ಇದರಿಂದ ಸರಾಸರಿ ಒಂದು ತಿಂಗಳ ಕಾಲ ಮಕ್ಕಳು ಪಾಠಶಾಲೆಯಿಂದ ದೂರವಿರುತ್ತಾರೆ. ಖಾಸಗಿ ಶಾಲೆಗಳು ಎಂದಿನಂತೆ ನಡೆಯುತ್ತವೆ. ಇದು ಲಕ್ಷಾಂತರ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಮೇಲೆ ದುರ್ಫಲ ಬೀರುತ್ತದೆ.”
“ಬೆಸಿಗೆ ರಜೆಯಲ್ಲಿ ಮಾಡಬಹುದಿತ್ತು ಸಮೀಕ್ಷೆ”
ಇನ್ನು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗದಂತೆ ಸಮೀಕ್ಷೆ ನಡೆಸಬಹುದಿತ್ತು ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.”ಈ ಸಮೀಕ್ಷೆ ನಿಜವಾಗಿಯೂ ಸಾಮಾಜಿಕ ಕಲ್ಯಾಣದ ಉದ್ದೇಶ ಹೊಂದಿದ್ದರೆ, ಬೇಸಿಗೆ ರಜೆಯಲ್ಲಿ ನಡೆಸಬಹುದಿತ್ತು. ಇಂದಿನ ತುರ್ತು ನಿರ್ಧಾರಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಿದೆ.”

“ರಾಜಕೀಯ ಸ್ವಾರ್ಥಕ್ಕಾಗಿ ವಿದ್ಯಾರ್ಥಿಗಳ ಭವಿಷ್ಯವನ್ನೇ ತ್ಯಾಗ ಮಾಡುತ್ತಿದ್ದಾರ”
ಈ ಸಮೀಕ್ಷೆಯು ನಿಜವಾಗಿಯೂ ಸಾಮಾಜಿಕ ಕಲ್ಯಾಣದ ಬಗ್ಗೆ ಆಗಿದ್ದರೆ, ಬೇಸಿಗೆ ರಜೆಯ ಸಮಯದಲ್ಲಿ ಶಿಕ್ಷಣವನ್ನು ಅಡ್ಡಿಪಡಿಸದೆ ವ್ಯವಸ್ಥಿತವಾಗಿ ನಡೆಸಬಹುದಿತ್ತು. ಇವರ ರಾಜಕೀಯದ ತೆವಲಿಗೋಸ್ಕರ ಸಾರ್ವಜನಿಕರ ತೆರಿಗೆ ಹಣವನ್ನು ವ್ಯರ್ಥ ಮಾಡುವ ಜೊತೆಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೂಡ ಅಡ್ಡಿಪಡಿಸುತ್ತಿದೆ. ಸರ್ಕಾರದ ಈ ನಿಲುವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನು ನೋಡಿ : NIKHIL KUMARSWAMY | ಕಾಲ್ತುಳಿತ ದುರಂತಕ್ಕೆ ಸರ್ಕಾರದ ದುರಾಡಳಿತವೇ ಕಾರಣ ಎಂದು ನಿಖಿಲ್ ಆಕ್ರೋಶ

ಇನ್ನು ಜಾತಿಗಣತಿ ಸಮೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ದಸರಾ ರಜೆ ವಿಸ್ತರಣೆ ಮಾಡಿರುವುದು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ತಕ್ಷಣ ಮರುಪರಿಶೀಲಿಸಬೇಕೆಂಬ ಒತ್ತಾಯ ಹೆಚ್ಚಾಗುತ್ತಿದೆ.




