
ಪ್ರಧಾನಿ ನರೇಂದ್ರ ಮೋದಿ 75ನೇ ವಸಂತಕ್ಕೆ ಕಾಲಿಟ್ಟಿದ್ದು, ಇಂದು ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೋದಿ ಜನ್ಮದಿನವನ್ನು ಆಚರಣೆ ಮಾಡುತ್ತಿದ್ದಾರೆ. ಅಲ್ದೇ ವಿಪಕ್ಷ ನಾಯಕರು ಸೇರಿ ಕಾರ್ಯಕರ್ತರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ. ಇತ್ತ ತುಮಕೂರಿನಲ್ಲೂ ಮೋದಿ ಜನ್ಮ ದಿನದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಕ್ಯಾತ್ಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೋದಿ ಜನ್ಮದಿನಾಚರಣೆಯನ್ನು ಆಯೋಜನೆ ಮಾಡಲಾಗಿದ್ದು, ಕೇಂದ್ರ ಸಚಿವ ಸೋಮಣ್ಣ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯ್ತು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಬಿಜೆಪಿಯ ಹಲವು ಮುಖಂಡರು ಭಾಗಿಯಾಗಿದ್ರು.
ಇನ್ನು ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ ಕೇಂದ್ರ ಸಚಿವ ಸೋಮಣ್ಣ, ಸುಮಾರು 40 ಸಾವಿರ ಶಾಲಾ ಮಕ್ಕಳಿಗೆ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಸೋಮಣ್ಣ ಭಾವಚಿತ್ರ ಇರುವ ನೋಟ್ ಬುಕ್ ವಿತರಣೆ ಮಾಡಿದ್ದು, ಸಾಂಕೇತಿಕವಾಗಿ ಕ್ಯಾತ್ಸಂದ್ರ ಶಾಲೆಯಲ್ಲಿ ಕೆಲ ವಿದ್ಯಾರ್ಥಿಗಳಿಗೆ ಸೋಮಣ್ಣ ನೋಟ್ ಬುಕ್ ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಮೋದಿ ಜನ್ಮದಿನವನ್ನು ಆಚರಣೆ ಮಾಡಲಾಯ್ತು.

ಇನ್ನು ಕ್ಯಾತ್ಸಂದ್ರ ಸರ್ಕಾರಿ ಶಾಲೆಯಲ್ಲಿ ಮೋದಿ ಜನ್ಮದಿನಾಚರಣೆ ಆಚರಿಸಿದ ಬಳಿಕ ನಗರದ ಸಂಸದರ ಕಚೇರಿ ಆವರಣದಲ್ಲಿ ಮೋದಿ ಜನ್ಮ ದಿನಾಚರಣೆಯನ್ನು ಆಚರಣೆ ಮಾಡಲಾಯ್ತು. ಸಂಸದ ಕಚೇರಿ ಆವರಣದಲ್ಲಿ ಮೋದಿ ಜನ್ಮ ದಿನಾಚರಣೆ ಅಂಗವಾಗಿ ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಆರೋಗ್ಯ ಶಿಬಿರದಲ್ಲಿ ಖುದ್ದು ಸೋಮಣ್ಣ ಹಾಗೂ ಮಾಜಿ ಎಂಎಲ್ಸಿ ಹುಲಿನಾಯ್ಕರ್ ಅವರೇ ಬಿ.ಪಿ ಹಾಗೂ ಶೂಗರ್ ಚೆಕ್ ಮಾಡಿಸಿಕೊಳ್ಳುವ ಮೂಲಕ ಗಮನ ಸೆಳೆದ್ರು. ಈ ವೇಳೆ ಕಾರ್ಯಕ್ರಮದಲ್ಲಿ ಶಾಸಕ M T ಕೃಷ್ಣಪ್ಪ, ಗುಬ್ಬಿ ಬಿಜೆಪಿ ಮುಖಂಡ ದಿಲೀಪ್ ಕುಮಾರ್, ಮಾಜಿ ಸಚಿವ ಬಸವರಾಜು, ಚಿದಾನಂದ್ ಭಾಗಿಯಾದ್ರು.
ಇತ್ತ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನದ ಅಂಗವಾಗಿ ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ ಅವರು ವಿಶ್ವವಿದ್ಯಾನಿಲಯದ ಮುಂಭಾಗ ಬೃಹತ್ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಪ್ರಧಾನ ಮಂತ್ರಿ ಮೋದಿಗೆ 75 ವರ್ಷದ ಸಂಭ್ರಮ ಹಿನ್ನೆಲೆ 75 ಯೂನಿಟ್ ರಕ್ತ ಸಂಗ್ರಹಿಸುವ ಗುರಿಯೊಂದಿಗೆ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಶಾಸಕ ಸುರೇಶ್ ಗೌಡ ಅವರೇ ಸ್ವತಃ ರಕ್ರದಾನ ಮಾಡುವ ಮೂಲಕ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ್ರು. ಅಲ್ದೇ ಇಂದಿನಿಂದ ಅಕ್ಟೋಬರ್ 2ರವರೆಗೆ ಅಕ್ಟೋಬರ್ 2ರವರೆಗೂ ವಿವಿಧ ಸೇವಾ ಕಾರ್ಯಗಳನ್ನು ಶಾಸಕ ಸುರೇಶ್ ಗೌಡ ಅವರು ಹಮ್ಮಿಕೊಳ್ಳಲಾಗಿದೆ. ಇನ್ನು ಮೋದಿ ಜನ್ಮ ದಿನದ ಅಂಗವಾಗಿ ಆಯೋಜನೆ ಆಗಿದ್ದ ರಕ್ತದಾನ ಶಿಬಿರದಲ್ಲಿ ಶಾಸಕ ಜ್ಯೋತಿ ಗಣೇಶ್, ಜಿಲ್ಲಾ ಅಧ್ಯಕ್ಷ ರವಿ ಹೆಬ್ಬಾಕ, ನಗರಾಧ್ಯಕ್ಷ ಧನುಷ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚೇತನ್, ಸೇರಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ರು.

ಇತ್ತ ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಮಾಜಿ ಸಚಿವ ಸೊಗಡು ಶಿವಣ್ಣ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ರೋಗಿಗಳಿಗೆ ಹಣ್ಣ, ಬ್ರೆಡ್ ಹಾಗೂ ಬಿಸ್ಕೇಟ್ ಹಂಚಿದ್ರು. ಈ ವೇಳೆ ಜಿ. ಪಂಚಾಯತ್ ಮಾಜಿ ಸದಸ್ಯರಾದ ಗೂಳೂರು ಶಿವಕುಮಾರ್, ಬಿಜೆಪಿ ಮುಖಂಡ ಪ್ರಭಾಕರ್, ರಫೀಕ್ ಅಹಮದ್ ಸೇರಿದಂತೆ ಅನೇಕರು ಭಾಗಿಯಾಗಿದ್ರು.
ಒಟ್ನಲ್ಲಿ ಪ್ರಧಾನಿ ಮೋದಿ ಜನ್ಮ ದಿನದ ಅಂಗವಾಗಿ ತುಮಕೂರು ನಗರದಲ್ಲಿ ಅರ್ಥಪೂರ್ಣವಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು, ಬಿಜೆಪಿ ನಾಯಕರು ಒಬ್ಬೊಬ್ಬರು ಒಂದೊಂದು ಕಡೆ ಕಾರ್ಯಕ್ರಮ ಆಯೋಜನೆ ಮಾಡಿದ್ದು, ತುಮಕೂರು ಬಿಜೆಪಿಯಲ್ಲಿ ಬಣ ರಾಜಕೀಯ ಶುರುವಾಗಿದ್ಯಾ ಎಂಬ ಅನುಮಾನ ಶುರುವಾಗಿದೆ.




