Belagavi Dog Attack :ಬೆಳಗಾವಿಯ ಮಾರುತಿ ನಗರದಲ್ಲಿ ಬೀದಿ ನಾಯಿಗಳ ದಾಳಿ — 2 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಉಂಟಾಗಿದೆ. ಅಧಿಕಾರಿಗಳು ನಾಯಿಗಳ ಹಾವಳಿಯನ್ನು ತಡೆಗಟ್ಟುವಲ್ಲಿ ವಿಫಲ.

Belagavi Dog Attack : ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ಹೆಚ್ಚುತ್ತಿದೆ
ರಾಜ್ಯದ ಹಲವೆಡೆಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಭಯದ ನೆರಳಿನಲ್ಲಿ ಜೀವನ ನಡೆಸುತ್ತಿದ್ದಾರೆ.
ಮಕ್ಕಳು, ಹಿರಿಯರು ಎಂಬ ವ್ಯತ್ಯಾಸವಿಲ್ಲದೆ ನಾಯಿಗಳು ದಾಳಿ ನಡೆಸುತ್ತಿರುವ ಘಟನೆಗಳು ವರದಿಯಾಗುತ್ತಿವೆ.
ಅದ್ರಲ್ಲೂ ಬೆಳಗಾವಿಯಲ್ಲಿ ನಡೆದ ಇತ್ತೀಚಿನ ಘಟನೆ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.
MUST READ: Supreme Court Issue : Supreme Court ಜಡ್ಜ್ ಗೆ Shoe ಎಸೆದ Lawyer ವಿರುದ್ದ ಕಠಿಣ ಕ್ರಮಕ್ಕೆ ಭೀಮ್ ಸೇನೆ ಆಗ್ರಹ!

ಮಾರುತಿ ನಗರದಲ್ಲಿ ಕಂದಮ್ಮನ ಮೇಲೆ ನಾಯಿಗಳ ಹಿಂಸಾಚಾರ
ಬೆಳಗಾವಿಯ ಮಾರುತಿ ನಗರದಲ್ಲಿ ವಾಸವಾಗಿರುವ ಪುಟ್ಟ ಆರಾಧ್ಯ ತರಗಾರ (2 ವರ್ಷ) ಎಂಬ ಮಗು ಮನೆಯ ಮುಂದೆ ಆಟವಾಡುತ್ತಿದ್ದಾಗ ಬೀದಿ ನಾಯಿಗಳು ದಾಳಿ ಮಾಡಿವೆ.
ನಾಯಿಗಳು ಮಗುವಿನ ಮುಖಮೂತಿಯನ್ನು ಕಚ್ಚಿಹಾಕಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ.
ಈಗ ಮಗುವಿಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾರ್ವಜನಿಕರಿಂದ ಅಧಿಕಾರಿಗಳ ವಿರುದ್ಧ ಆಕ್ರೋಶ
Belagavi Dog Attack ಈ ಘಟನೆ ಬಳಿಕ, ಆರಾಧ್ಯ ಕುಟುಂಬಸ್ಥರು ಹಾಗೂ ಸ್ಥಳೀಯರು ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೀದಿ ನಾಯಿಗಳನ್ನು ಹಿಡಿಯಲು ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಜನರು ಅಸಮಾಧಾನಗೊಂಡಿದ್ದಾರೆ.
ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಗರಿಕರು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯದೆಲ್ಲೆಡೆ ನಾಯಿಗಳ ಹಾವಳಿ
ಕರ್ನಾಟಕದ ಬಹುತೇಕ ನಗರಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗುತ್ತಿದ್ದು, ಶಾಲಾ ಮಕ್ಕಳು, ಹಿರಿಯ ನಾಗರಿಕರು ಭಯದಿಂದ ರಸ್ತೆಗಳಲ್ಲಿ ಸಂಚರಿಸುವಂತಾಗಿದೆ.
ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳದಿದ್ದರೆ, ಇಂತಹ ಘಟನೆಗಳು ಮುಂದುವರಿಯುವ ಸಾಧ್ಯತೆ ಇದೆ ಎಂಬ ಆತಂಕವೂ ವ್ಯಕ್ತವಾಗಿದೆ.
MUST WATCH: ಬೀದಿ ನಾಯಿಗಳ DEADLY ATTACK | ಮಗುವಿನ ಮುಖ ಕಚ್ಚಿ ಹಾಕಿದ SHOCKING ಘಟನೆ | BELAGAVI NEWS |




