Justice for Soujanya : ರಾಜ್ಯಾದ್ಯಂತ ಮತ್ತೆ ಸೌಜನ್ಯ ಕೇಸ್ ಸದ್ದು ಮಾಡುತ್ತಿದ್ದು, ಸೌಜನ್ಯ ಸಾವಿನ ನ್ಯಾಯಕ್ಕಾಗಿ ಪ್ರತಿಭಟನೆಯ ಕಿಚ್ಚು ಜೋರಾಗುತ್ತಿದೆ.

ಸೌಜನ್ಯ ಪ್ರಕರಣ: ನ್ಯಾಯಕ್ಕಾಗಿ ತುಮಕೂರಿನಲ್ಲಿ ಪ್ರತಿಭಟನೆ
ರಾಜ್ಯಾದ್ಯಂತ ಮತ್ತೆ ಸೌಜನ್ಯ ಕೇಸ್ ಸದ್ದು ಮಾಡುತ್ತಿದ್ದು, ಸೌಜನ್ಯ ಸಾವಿನ ನ್ಯಾಯಕ್ಕಾಗಿ ಪ್ರತಿಭಟನೆಯ ಕಿಚ್ಚು ಜೋರಾಗುತ್ತಿದೆ. ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹ ಕೇಳಿ ಬಂದಿದೆ. ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಜನಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು. ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗಿಯಾಗಿದ್ರು.
13 ವರ್ಷವಾದರೂ ನ್ಯಾಯವಿಲ್ಲ ಎಂದು ಸಂಘಟನೆಗಳ ಆಕ್ರೋಶ
ತುಮಕೂರು ನಗರದ ಡಿಸಿ ಕಚೇರಿ ಮುಂದೆ ಜನಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ರು. ಸೌಜನ್ಯ ಪ್ರಕರಣ ನಡೆದು ಸುಮಾರು 13 ವರ್ಷ ಕಳೆದ್ರು ಕೂಡ ಸಾಜನ್ಯ ಸಾವಿಗೆ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಧರ್ಮಸ್ಥಳದಲ್ಲಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ನಡೆದು 13 ವರ್ಷಗಳೇ ಕಳೆದಿದ್ರು ಕೂಡ ಇನ್ನು ನ್ಯಾಯ ಸಿಕ್ಕಿಲ್ಲ, ಎಸ್ಐಟಿಯನ್ನು ರಚನೆ ಮಾಡಿದ್ದಾರೆ ಆದ್ರೆ ತನಿಖೆಯ ಹಾದಿಯನ್ನು ತಪ್ಪಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ರು.
ಇದನ್ನು ನೋಡಿ : ತುಮಕೂರಿನಲ್ಲಿ ಜನರ ಆಕ್ರೋಶ – ಭುಗಿಲೆದ್ದ ಪ್ರತಿಭಟನೆ!

ತಹಶೀಲ್ದಾರ್ ರಾಜೇಶ್ವರಿ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕಾರ
ಇನ್ನು ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ರಾಜೇಶ್ವರಿ ಆಗಮಿಸಿದ್ದು, ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿ ಸರ್ಕಾರಕ್ಕೆ ತಲುಪಿಸುವ ಕೆಲಸ ಮಾಡುವುದಾಗಿ ಭರವಸೆ ನೀಡಿದ್ರು.
ಇದನ್ನು ಓದಿ : Metro Ticket Price ಏರಿಕೆ- BMRCL ಗೆ ಸಂಸದ ತೇಜಸ್ವಿ ಸೂರ್ಯ ಪತ್ರ





