Mysuru Lorry and Bus Accident : ಸಿಮೆಂಟ್ ಲಾರಿ, ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಕೊಡಗು ಹೆದ್ದಾರಿಯಲ್ಲಿ ನಡೆದಿದೆ.

ಮೈಸೂರು-ಕೊಡಗು ಹೆದ್ದಾರಿಯಲ್ಲಿ ಭೀಕರ ಅಪಘಾತ
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತ ಮೈಸೂರು-ಕೊಡಗು ಹೆದ್ದಾರಿಯಲ್ಲಿ ನಡೆದಿದೆ.
ಬಸ್ ಚಾಲಕ ಮತ್ತು ಕ್ಲೀನರ್ ದುರ್ಮರಣ
ಇನ್ನು ಈ ಅಪಘಾತದಲ್ಲಿ ಬಸ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನು ಓದಿ : Car & Tipper Lorry Met With An Accident In Mysore

ಸಿಮೆಂಟ್ ಲಾರಿ ಬಸ್ಗೆ ಡಿಕ್ಕಿ
ಮೈಸೂರಿನಿಂದ ಕೇರಳದ ಕಡೆಗೆ ಹೋಗುತ್ತಿದ್ದ ಸಿಮೆಂಟ್ ಲಾರಿಗೆ, ಕೇರಳದಿಂದ ಮೈಸೂರಿನ ಕಡೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸದಿಂದ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿ ಪಲ್ಟಿಯಾಗಿದೆ. ಸಿಮೆಂಟ್ ಲಾರಿ ಪಲ್ಟಿಯಾಗಿದೆ. ಅಪಘಾತಕ್ಕೊಳಗಾದ ಎರಡೂ ವಾಹನಗಳು ಕೇರಳ ಮೂಲದ್ದಾಗಿದೆ.
ಇದನ್ನು ನೋಡಿ : ಬಿಗ್ ಬಾಸ್ ಫ್ಯಾನ್ಸ್ ಗೆ ಗುಡ್ ನ್ಯೂಸ್ ಮನೆ ಬೀಗ ಓಪನ್ ಮಾಡಿಸಿದ್ದು ಯಾರು
ಪೊಲೀಸರು ಸ್ಥಳಕ್ಕೆ ಭೇಟಿ
ಇನ್ನು ಘಟನೆಯ ಮಾಹಿತಿ ಪಡೆದ ಬಿಳಿಕೆರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ. ಮೃತದೇಹಗಳನ್ನು ಹುಣಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.




