
CHIKKANAYAKANAHALLI PROTEST : ಚಿಕ್ಕನಾಯಕಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದಲ್ಲಿ ನೀರು ಸೇರಿ ಇತರ ಮೂಲಭೂತ ಸೌಕರ್ಯಗಳ ಕೊರ ತೆಯನ್ನು ಖಂಡಿಸಿ ರೈತ ಸಂಘದ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸಲಾಯ್ತು. ಅಹೋರಾತ್ರಿ ಧರಣಿಯಲ್ಲಿ ಜಯಕರ್ನಾಟಕ ರಕ್ಷಣಾ ವೇದಿಕೆ, ಮಹಿಳಾ ಸಂಘ, ಆಟೋ ಚಾಲಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಭಾಗಿಯಾಗಿದ್ದವು. ಕುಡಿಯುವ ನೀರು, ಸ್ವಚ್ಛತೆ, ಬಸ್ ನಿಲ್ದಾಣದಲ್ಲಿ ಶೌಚಾಲಯದ ವ್ಯವಸ್ಥೆ, ಸಂತೆ ಸ್ಥಳಾಂತರ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದ್ರು.
ಅಹೋರಾತ್ರಿ ಧರಣಿ ಮಾಡಲು ಸಂಘಟನೆಗಳು ನಿರ್ಧರಿಸಿದ್ದು, ಬೆಡ್ಶಿಟ್, ಅಡುಗೆ ಮಾಡಿಕೊಳ್ಳಲೆ ಬೇಕಾ ದ ಸಾಮಾಗ್ರಿಗಳ ಸಮೇತ ಹುಳಿಯಾರು ಪಟ್ಟಣ ಪಂಚಾಯ್ತಿ ಮುಂದೆ ಪ್ರತಿಭಟನಾಕಾರರು ಜಮಾಯಿ ಸಿದ್ರು. ಹುಳಿ ಯಾರು ಪಟ್ಟಣ ಪಂಚಾಯ್ತಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವ್ಯಾಪಕ ಆಕ್ರೋಶ ಹೊರಹಾಕಿ ದ್ರು. ಕೂಡಲೇ ಪ್ರತಿಭಟನ ಸ್ಥಳಕ್ಕೆ ಆಗಮಿಸಿದ ಪಿಎಸ್ಐ ಧರ್ಮಾಂಜಿ ಅವರು ಮಧ್ಯ ಸ್ಥಿಕೆ ವಹಿಸಿ, ಮಾತುಕತೆ ನಡೆಸಿದ್ರು. ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಕಾವ್ಯ ರಾಣಿ ಹಾಗೂ ಮುಖ್ಯಾಧಿಕಾರಿ ಮಂಜುನಾಥ್ ಅವರು ಮುಂದಿನ 15 ದಿನಗಳಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
ಭರವಸೆ ನೀಡಿದ ಬೆನ್ನಲ್ಲೇ ಪ್ರತಿಭಟನಾಕಾರರು ತಮ್ಮ ಅಹೋರಾತ್ರಿ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆ ಯಲಾಗಿದೆ. 10 ದಿನದೊಳಗಾಗಿ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ರೈತ ಮುಖಂಡರು ಎವಚ್ಚರಿಕೆ ನೀಡಿದ್ರು.




