Ballari Childrens Death : ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಬಳ್ಳಾರಿಯ ಮೈಲಾಪುರ ಗ್ರಾಮದಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ದಾರುಣ ಘಟನೆ ಸಂಭವಿಸಿದೆ. ಹೊಲದಲ್ಲಿ ನಿರ್ಮಿಸಲಾಗಿದ್ದ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ.
ಹೊಂಡದಲ್ಲಿ ಆಟವಾಡುವಾಗ ಸಂಭವಿಸಿದ ಅವಘಡ
ಮೃತ ಮಕ್ಕಳನ್ನು ಬಲಕುಂದಿ ಗ್ರಾಮದ ಮಹಾಂಕಾಳಿ (12 ವರ್ಷ) ಮತ್ತು ಶಿವರಾಜ್ (09 ವರ್ಷ) ಎಂದು ಗುರುತಿಸಲಾಗಿದೆ. ಮೈಲಾಪುರ ಗ್ರಾಮದ ಕೃಷಿ ಜಮೀನಿನಲ್ಲಿ ಹೊಂಡವೊಂದರಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಇದನ್ನು ನೋಡಿ : ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತ
ಪರಿಶೀಲನೆಗೆ ಅಧಿಕಾರಿಗಳ ಭೇಟಿ
ಘಟನಾ ಸ್ಥಳಕ್ಕೆ ಉಪತಹಶೀಲ್ದಾರ್ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬದವರಿಂದ ಮಾಹಿತಿ ಸಂಗ್ರಹಿಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಹನುಮಂತಪ್ಪ ಮತ್ತು ಗ್ರಾಮ ಆಡಳಿತಾಧಿಕಾರಿ ದೇವರಾಜ್ ಸಹ ಇದ್ದರು.
ಪೊಲೀಸ್ ಪ್ರಕರಣ ದಾಖಲು
ಇನ್ನು ಘಟನೆಯ ಬಗ್ಗೆ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಸಂಬಂಧಿತ ಇಲಾಖೆಗಳು ಮತ್ತು ಅಧಿಕಾರಿಗಳು ಹೊಂಡಗಳ ಸುರಕ್ಷತೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಅಗತ್ಯತೆ ಇಲ್ಲಿ ಉಂಟಾಗಿದೆ.
ಇದನ್ನು ಓದಿ : ಮಿತಿ ಮೀರಿದ ನಾಯಿ ಕಡಿತ ಪ್ರಕರಣ | Police Head Constable ಮೇಲೆ ಎರಗಿದ ಶ್ವಾನ




