Tumakuru News : ತುಮಕೂರು ನಗರದ 78 ವರ್ಷಗಳ ಹಳೆಯ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ತೆರವುಗೊಳಿಸಿ, ಆ ಜಾಗದಲ್ಲೇ ನೂತನ ಆಸ್ಪತ್ರೆ ನಿರ್ಮಾಣ ಕಾರ್ಯ ನಡೆಯಲಿದೆ

ತುಮಕೂರಿನಲ್ಲಿ 300 ಹಾಸಿಗೆಗಳ ಸಾಮರ್ಥ್ಯದ ನೂತನ ಜಿಲ್ಲಾ ಆಸ್ಪತ್ರೆಗೆ ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಲಿದೆ. ಸುಮಾರು ₹131 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.
ಹಳೆಯ ಆಸ್ಪತ್ರೆ ತೆರವುಗೊಳಿಸಿ ನೂತನ ಕಟ್ಟಡ
ನಗರದ 78 ವರ್ಷಗಳ ಹಳೆಯ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ತೆರವುಗೊಳಿಸಿ, ಆ ಜಾಗದಲ್ಲೇ ನೂತನ ಆಸ್ಪತ್ರೆ ನಿರ್ಮಾಣ ಕಾರ್ಯ ನಡೆಯಲಿದೆ. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಹೊಸ ಜಿಲ್ಲಾ ಆಸ್ಪತ್ರೆ ನಿರ್ಮಾಣದ ವಿವರವಾದ ಯೋಜನಾ ವರದಿ (ಆPಖ) ತಯಾರಿಕೆ, ವಾಸ್ತುಶಿಲ್ಪ, ರಚನಾತ್ಮಕ ವಿನ್ಯಾಸ ಹಾಗೂ ಇತರ ತಾಂತ್ರಿಕ ರೇಖಾಚಿತ್ರಗಳ ಸಿದ್ಧತೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಇದನ್ನು ನೋಡಿ : ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿದ ಶಾಸಕ SURESH GOWDA

100 ಹಾಸಿಗೆಗಳ ತುರ್ತು ನಿಗಾ ಘಟಕ ಉದ್ಘಾಟನೆಗೂ ತಯಾರಿ
ಜಿಲ್ಲಾಸ್ಪತ್ರೆ ಆವರಣದಲ್ಲಿ ಈಗಾಗಲೇ ನಿರ್ಮಿತವಾದ 100 ಹಾಸಿಗೆಗಳ ತುರ್ತು ನಿಗಾ ಘಟಕದ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನೂ ನಿಗದಿತ ದಿನದಂದು ನಡೆಸುವಂತೆ ಸೂಚನೆ ನೀಡಲಾಗಿದೆ.
ಇತರ ಆರೋಗ್ಯ ಸಂಕೀರ್ಣಗಳಿಗೂ ಶಂಕುಸ್ಥಾಪನೆ
- ನರ್ಸಿಂಗ್ ಕಾಲೇಜು ಕಟ್ಟಡ
- ದಿಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರ
- ಇತರೆ ಸ್ಥಳೀಯ ಆರೋಗ್ಯ ಕೇಂದ್ರಗಳ ಕಟ್ಟಡ ಕಾಮಗಾರಿಗಳಿಗೆ
ಈ ಎಲ್ಲಾ ಶಂಕುಸ್ಥಾಪನೆಗಳೂ ಒಂದೇ ದಿನ ನೆರವೇರಲು ಕಾರ್ಯ ಯೋಜನೆ ರೂಪಿಸಲಾಗುತ್ತಿದೆ.
ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ
ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮಗಳಿಗೆ ಮಾನ್ಯ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು ಎಂದು ಸಚಿವರು ಹೇಳಿದರು.

ಇನ್ನು ಸಭೆಯಲ್ಲಿ ಸಭೆಯಲ್ಲಿ ಶಾಸಕರಾದ ಟಿ.ಬಿ. ಜಯಚಂದ್ರ (ಶಿರಾ), ಎಂ.ಟಿ. ಕೃಷ್ಣಪ್ಪ (ತುರುವೇಕೆರೆ), ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ್ ಬಿ., ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್, ಡಾ. ಅಸ್ಗರ್ ಬೇಗ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನು ಓದಿ : ದೇವೇಗೌಡರ ಆರೋಗ್ಯ ವಿಚಾರಿಸಿದ ನಿರ್ಮಲಾನಂದ ಶ್ರೀಗಳು




