
VIJAYANAGARA NEWS : ನೀರು ಬಿಸಿ ಮಾಡಲು ಬಳಸುತ್ತಿದ್ದ ವಾಟರ್ ಹೀಟರ್ನಿಂದ ವಿದ್ಯುತ್ ಸ್ಪರ್ಶಿಸಿ ಬಾಲಕಿಯೋರ್ವಳು ದುರ್ಮರಣ ಹೊಂದಿರುವ ಘಟನೆ ವಿಜಯಪುರ ಜಿಲ್ಲೆಯ ಕೂಡ್ಲಿಗಿಯ ಕಕ್ಕುಪ್ಪಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಇನ್ನು ವಿದ್ಯುತ್ ಲೈನ್ನಲ್ಲಿ ಉಂಟಾದ ತೊಂದರೆಯಿಂದ ಈ ದುರಂತ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಘಟನೆಯ ವಿಚಾರ ತಿಳಿದ ಕೂಡಲೇ ಕ್ಷೇತ್ರದ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮೃತ ಬಾಲಕಿಯ ಕುಟುಂಬದವರಿಗೆ ಸಾಂತ್ವನ ಹೇಳಿದರು. ಜೊತೆಗೆ ಅಂತ್ಯ ಸಂಸ್ಕಾರ ವೆಚ್ಚಕ್ಕಾಗಿ ಸಹಾಯಧನವನ್ನು ಘೋಷಿಸಿದರು ಮತ್ತು ಕುಟುಂಬಕ್ಕೆ ಧೈರ್ಯ ತುಂಬಿದರು.




