Dhawan Rakesh : ಇತ್ತೀಚೆಗೆ ಹಲವು ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಧವನ್ ರಾಕೇಶ್ ಕಾಣಿಸಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ನಡೆದ ಹಲವಾರು ಸಾರ್ವಜನಿಕ ಹಾಗೂ ರಾಜಕೀಯ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಕೇಶ್ ವೇದಿಕೆಯಲ್ಲಿ ತಾತನ ಜೊತೆಗೆ ಕಾಣಿಸಿಕೊಳ್ಳುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಜೊತೆಗಿನ ಫೋಟೊಗಳನ್ನು ಸಿದ್ದರಾಮಯ್ಯ ಮೊಮ್ಮಗ ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊAಡಿದ್ದು, ರಾಜಕೀಯ ಬಗೆಗಿನ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ.
ರಾಜಕೀಯ ಪ್ರವೇಶದ ಸುಳಿವು?
ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ ಫೋಟೋಗಳು ಹಾಗೂ ಭಾನುವಾರ ನಡೆದ ಕಾಂಗ್ರೆಸ್ ಸಮಾವೇಶದ ವೇದಿಕೆಯಲ್ಲಿ ಸಿದ್ದರಾಮಯ್ಯ ಅವರ ಬೆನ್ನೆಲೆಯಲ್ಲಿ ಧವನ್ ರಾಕೇಶ್ ಇದ್ದದ್ದು, ಮುಂದಿನ ರಾಜಕೀಯ ಲೀಡರ್ ತಯಾರಿ ನಡೆಯುತ್ತಿದೆ ಎಂಬ ತೀವ್ರ ಸಂದೇಶ ನೀಡುತ್ತಿದೆ.

ಇದನ್ನು ನೋಡಿ : ರಾಹುಲ್ ಗಾಂಧಿ ಜೊತೆಗಿನ ಫೋಟೊ ಶೇರ್
ಪಾರಂಪರಿಕ ರಾಜಕೀಯಕ್ಕೂ ಹೊಸ ತಲೆಮಾರಿಗೆ ಆಸರೆ?
ಧವನ್ ರಾಕೇಶ್ ಈವರೆಗೆ ರಾಜಕೀಯವಾಗಿ ಯಾವುದೇ ಘೋಷಣೆ ಮಾಡಿಲ್ಲ. ಆದರೆ ಅವರು ಈಗಾಗಲೇ ಯುವ ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿದ್ದಾರೆ. ಈ ಬೆಳವಣಿಗೆಯು, ಸಿದ್ದರಾಮಯ್ಯ ಕುಟುಂಬದಿಂದ ಮುಂದಿನ ರಾಜಕೀಯ ತಲೆಮಾರಿಗೆ ದಾರಿ ಸಿದ್ಧವಾಗುತ್ತಿದೆ ಎಂಬ ಸೂಚನೆ ನೀಡುತ್ತಿದೆ.
ಪೋಸ್ಟ್ನಲ್ಲಿ ಏನಿದೆ?
ಕಳೆದ ಆ.8 ರಂದು, ನಮ್ಮ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸದಾವಕಾಶ ನನಗೆ ದೊರೆಯಿತು. ಪ್ರಾಮಾಣಿಕ ನಾಯಕರನ್ನು ನಾನು ಎಷ್ಟರ ಮಟ್ಟಿಗೆ ಗೌರವಿಸುತ್ತೇನೆ ಮತ್ತು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂಬುದನ್ನು ನನ್ನ ತಾತ ಗುರುತಿಸಿದ್ದರಿಂದ ಇದು ಸಾಧ್ಯವಾಯಿತು. ಈ ರಾಜಕೀಯ ವಲಯದಲ್ಲಿ ಪ್ರಾಮಾಣಿಕತೆಯನ್ನು ಬಹುತೇಕವಾಗಿ ಕಡೆಗಣಿಸಲಾಗಿದೆ. ಆದರೆ, ಇದೇ ವಲಯದಲ್ಲಿ ಪ್ರಾಮಾಣಿಕವಾಗಿರಲು ಯತ್ನಿಸುವ, ತನ್ನ ನಂಬಿಕೆಗೆ ಬದ್ಧವಾಗಿರುವ ನಾಯಕರನ್ನು ಭೇಟಿಯಾಗಲು ನಾನು ಇಚ್ಛಿಸುತ್ತೇನೆ.

ಇದನ್ನು ಓದಿ : ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟ ನಿಷೇಧಿಸಿದ Delhi Government
ರಾಜಕಾರಣವು ನನ್ನ ಬದುಕಿನ ಹಿನ್ನೆಲೆಯ ಒಂದು ಭಾಗವಾಗಿರುವುದು ನಿಜ. ಆದರೆ, ನಿರಂತರ ವಿರೋಧದ ನಡುವೆಯೂ ತನ್ನ ನಂಬಿಕೆ ಹಾಗೂ ಸಿದ್ಧಾಂತದ ಪರ ನಿಲ್ಲಲು ರಾಹುಲ್ ಗಾಂಧಿ ನಿರ್ಧರಿಸಿದರು. ಇಂತಹ ನಾಯಕನನ್ನು ಭೇಟಿಯಾಗಿದ್ದು ನಿಜವಾಗಿಯೂ ವಿಭಿನ್ನ ಅನುಭವವಾಗಿತ್ತು. ಅವರೊಂದಿಗೆ ಸ್ವಲ್ಪ ಕ್ಷಣಗಳ ಕಾಲ ಮಾತನಾಡಿದೆ. ಅವರ ಕುರಿತು ನನ್ನಲ್ಲಿರುವ ಅಪಾರ ಗೌರವದ ಬಗ್ಗೆ ತಿಳಿಸಿದೆ. ಈಗ ವಿದ್ಯಾರ್ಥಿಯಾಗಿ, ಮುಂದೆ ವಕೀಲನಾಗಿ ನಾನು ಅವರ ಜೊತೆ ನಿಲ್ಲಲು, ಅವರೊಂದಿಗೆ ಹೆಜ್ಜೆ ಹಾಕಲು ಬಯಸುತ್ತೇನೆಂದು ಹೇಳಿದೆ. ಈಗ ನಾವೆಲ್ಲರೂ ಸ್ವಲ್ಪ ಹೆಚ್ಚು ಮುನ್ನೆಚ್ಚರಿಕೆಯಿಂದ ಯೋಚಿಸಬೇಕಿದೆ. ಹೆಚ್ಚು ಜಾಗೃತರಾಗಬೇಕಿದೆ. ಸತ್ಯ, ನಿಷ್ಠೆ ಹಾಗೂ ಪಾರದರ್ಶಕತೆಯ ಮೂಲಕ ದೇಶವನ್ನು ಮುನ್ನಡೆಸುವ ನಾಯಕರನ್ನು ಗೌರವಿಸಬೇಕಿದೆ. ರಾಹುಲ್ ಗಾಂಧಿ ಅವರು ಸಾರ್ವಜನಿಕರು ಹಾಗೂ ಮಾಧ್ಯಮಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸುತ್ತಾರೆ. ಅದೇ ರೀತಿ, ನಾವು ಸಹ ಸಂವಾದಕ್ಕೆ ಮುಂದಾಗಬೇಕಿದೆ. ಪ್ರಾಮಾಣಿಕ ಸಂವಾದವನ್ನು ನಾನು ಯಾವಾಗಲೂ ಸ್ವಾಗತಿಸುತ್ತೇನೆ ಎಂದು ಪೋಸ್ಟ್ನಲ್ಲಿ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ಬರೆದುಕೊಂಡಿದ್ದಾರೆ.




