Kantara 1 : ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಕಾಂತಾರ-1 ಚಿತ್ರ ವಿಶೇಷ ಸ್ಥಾನ ಪಡೆಯಲಿದೆ ಎಂದು ಮಾಜಿ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಶ್ ಶ್ಲಾಘಿಸಿದ್ದಾರೆ.

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ‘ಕಾಂತಾರ-1′ ಚಿತ್ರವು ವಿಶೇಷ ಸ್ಥಾನ ಪಡೆದುಕೊಳ್ಳಲಿದೆ ಎಂದು ಹಿರಿಯ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಶ್ಲಾಘಿಸಿದ್ದಾರೆ.
ಎಕ್ಸ್ನಲ್ಲಿ (X) ಶ್ಲಾಘನಾ ಟ್ವೀಟ್
ಶುಕ್ರವಾರ ‘ಕಾಂತಾರ-1’ ಚಿತ್ರ ವೀಕ್ಷಿಸಿದ ಬಳಿಕ, ಅವರು ಸಾಮಾಜಿಕ ಜಾಲತಾಣ ಎಕ್ಸ್ (ಹಳೆಯದಾಗಿ ಟ್ವಿಟ್ಟರ್) ನಲ್ಲಿ ಈ ಕುರಿತು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು. ನಿರ್ದೇಶಕ ರಿಷಬ್ ಶೆಟ್ಟಿ ಅವರ ನೇತೃತ್ವದ ಸಿನಿಮಾವನ್ನು ಅವರು ಕೊಂಡಾಡಿದ್ದಾರೆ.

ಎಕ್ಸ್ನಲ್ಲಿ ಏನಿದೆ?
ಆತ್ಮೀಯ ರಿಷಭ್ ಅವರೇ, ಶುಕ್ರವಾರ ಕಾಂತಾರ-1 ನೋಡಿದೆ. ಕಾಂತಾರದ ಅದ್ಭುತ ಯಶಸ್ಸಿಗೆ ಅಭಿನಂದನೆಗಳು. ನಿಮ್ಮ ನಿರ್ದೇಶನ ಹಾಗೂ ಪ್ರತಿಯೊಬ್ಬ ಕಲಾವಿದರು ಪಾತ್ರಕ್ಕೆ ಜೀವ ತುಂಬಿದ ಪರಿ ನನ್ನನ್ನು ಮೂಕವಿಸ್ಮಿತಗೊಳಿಸಿದೆ. ಈ ದೃಶ್ಯ ವೈಭವವನ್ನು ತೆರೆಯ ಮುಂದೆ ತರಲು ಹಾಕಿದ ಪರಿಶ್ರಮ ಹಾಗೂ ಕರ್ನಾಟಕದ ಜಾನಪದ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಸೌಂದರ್ಯವನ್ನು ಪ್ರದರ್ಶಿಸಲು ನಿಮ್ಮ ಶ್ರಮವನ್ನು ಅತ್ಯಂತ ಗೌರವ ಹಾಗೂ ಹೆಮ್ಮೆಯಿಂದ ಶ್ಲಾಘಿಸುತ್ತೇನೆ.
ಅಕ್ಷರಶಃ ಇದೊಂದು ಸಿನಿಮಾಟಿಕ್ ಮಾಸ್ಟರ್ಪೀಸ್. ಕಾಂತಾರ-1 ಕನ್ನಡ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ. ಕಲೆಯ ಬಗ್ಗೆ ನಿಮಗಿರುವ ಉತ್ಸಾಹ ಮತ್ತು ಶ್ರದ್ಧೆ ಯುವ ಕಲಾವಿದರು ಹಾಗೂ ಚಿತ್ರರಂಗಕ್ಕೆ ಸ್ಫೂರ್ತಿಯಾಗಿದೆ.
ಇದನ್ನು ಓದಿ : ಡೆಲ್ಲಿ ಟೆಸ್ಟ್ ವೇಳೆ Shubman Gill ಗೆ ಪಪ್ರೋಸ್ ಮಾಡಿದ ಯುವತಿ!

ಇಡೀ ಕಾಂತಾರ ತಂಡವು ತಮ್ಮ ಅತ್ಯುತ್ತಮ ಕೆಲಸಕ್ಕಾಗಿ ಪ್ರಶಂಸೆಗೆ ಅರ್ಹವಾಗಿದೆ. ಕನ್ನಡ ಚಿತ್ರರಂಗದ ಪಯಣಕ್ಕೆ ಹೊಸ ಆಯಾಮವನ್ನು ಹಾಕಿಕೊಟ್ಟಿರುವ ಈ ದಂತಕಥೆ ಕನ್ನಡ ಚಿತ್ರರಂಗದ ಇತಿಹಾಸ ಪುಟದಲ್ಲಿ ವಿಶೇಷ ಸ್ಥಾನ ಪಡೆಯಲಿದೆ.
ನಮ್ಮ ಚಿತ್ರರಂಗಕ್ಕೆ ವಿಶ್ವದಾದ್ಯಂತ ಗೌರವ ಮತ್ತು ಕೀರ್ತಿಯನ್ನು ತಂದಿರುವ ನಿಮ್ಮ ಮುಂದಿನ ಎಲ್ಲಾ ಯೋಜನೆ ಗಳು ಇನ್ನಷ್ಟು ಯಶಸ್ಸನ್ನು ತಂದುಕೊಡಲಿ ಎಂದು ಶುಭ ಹಾರೈಸುವೆ ಎಂದು ಬಣ್ಣಿಸಿದ್ದಾರೆ.

ಇದನ್ನು ನೋಡಿ : ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ‘ಕಾಂತಾರ’ಕ್ಕೆ ವಿಶೇಷ ಸ್ಥಾನ

