BIDAR : ಆಟ ಆಡುವಾಗ ಬಾವಿಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಈಶ್ವರ ಕಾಲೋನಿಯಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಆಟ ಆಡುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಆರು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ಘಟನೆ ವಿವರ
ಈ ದುರ್ಘಟನೆ ಭೀದರ್ನ ಬಸವಕಲ್ಯಾಣ ಪಟ್ಟಣದ ಈಶ್ವರ ಕಾಲೋನಿಯಲ್ಲಿ ನಡೆದಿದೆ. ಮನೆಯ ಪಕ್ಕದಲ್ಲೇ ಆಟ ಆಡುವಾಗ, 6 ವರ್ಷದ ಶೇಖ್ ನುಸ್ತಕಿಮ್ ಅಕ್ಬರಲಿ ಎಂಬ ಬಾಲಕ ಬಾವಿಗೆ ಬಿದ್ದಿದ್ದಾನೆ. ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : ಡಿಕೆಶಿ ಎದುರು ಮುನಿರತ್ನ ಹೈಡ್ರಾಮಾ
ಶವ ಪತ್ತೆ
ಇನ್ನು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿ ಬಾಲಕನ ಶವವನ್ನು ಹೊರತೆಗೆದಿದ್ದಾರೆ. ನಂತರ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಸರ್ಕಾರಿ ಆಸ್ಪತ್ರೆಗೆ ಕಳಿಸಲಾಗಿದೆ.
ಪೊಲೀಸರ ತನಿಖೆ ಆರಂಭ
ಈ ಘಟನೆ ಬಸವಕಲ್ಯಾಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಸ್ಥಳೀಯರಲ್ಲಿ ಈ ಘಟನೆ ಆಘಾತ ಉಂಟುಮಾಡಿದ್ದು, ಮಕ್ಕಳ ಸುರಕ್ಷತೆ ಬಗ್ಗೆ ಕಾಳಜಿಯ ಚರ್ಚೆ ಆರಂಭವಾಗಿದೆ.

ಇದನ್ನು ನೋಡಿ : ಬಾವಿಗೆ ಬಿದ್ದು ಬಾಲಕ ಸಾವು




