Karnataka Weather Report : ಬೆಂಗಳೂರು ನಗರದಲ್ಲಿ ಕಳೆದ ಮೂರು ರಾತ್ರಿ ಧಾರಾಕಾರ ಮಳೆಯಾಗಿದೆ.

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಚಟುವಟಿಕೆಗಳು ತೀವ್ರಗೊಂಡಿದ್ದು, ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಳೆದ ಮೂರು ರಾತ್ರಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ನಗರದಲ್ಲಿ ಅನೇಕ ಕಡೆಗ ಳಲ್ಲಿ ಜಲಾವೃತ, ಸಂಚಾರ ಅಸ್ತವ್ಯಸ್ತ, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವಂತಹ ಪರಿಸ್ಥಿತಿಗಳು ಉಂಟಾಗಿವೆ.
ಇಂದು ಭಾರೀ ಮಳೆಯ ಮುನ್ಸೂಚನೆ
ಹವಾಮಾನ ಇಲಾಖೆ ನೀಡಿರುವ ವರದಿಯ ಪ್ರಕಾರ, ಅಕ್ಟೋಬರ್ 12, ಇಂದು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ, ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಾಗರಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಇದನ್ನು ನೋಡಿ : ಬೆಂಗಳೂರಿನಲ್ಲಿ ಇಂದು ಕೂಡ ನಿರಂತರ ಮಳೆ

ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಮಳೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳ ವಿವರ ಹೀಗಿವೆ:
- ಬೆಂಗಳೂರು ನಗರ
- ಬೆಂಗಳೂರು ಗ್ರಾಮಾಂತರ
- ಮೈಸೂರು
- ಮಂಡ್ಯ
- ರಾಮನಗರ
- ಕೋಲಾರ
- ಚಿಕ್ಕಮಗಳೂರು
- ಹಾಸನ
- ತುಮಕೂರು
- ಚಿಕ್ಕಬಳ್ಳಾಪುರ
- ಕೊಡಗು
ಜಲಾವೃತ ಹಾಗೂ ಸಂಚಾರ ಸಮಸ್ಯೆಗಳ ಎಚ್ಚರಿಕೆ
ನಗರದಲ್ಲಿ ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇದೆ. ವಾಹನ ಸವಾರರು ಹಾಗೂ ಪಾದಚಾರಿಗಳು ಸುರಕ್ಷಿತ ಮಾರ್ಗ ಬಳಸುವಂತೆ, ಅಗತ್ಯವಿದ್ದರೆ ಪ್ರಯಾಣವನ್ನು ಮುಂದೂಡಿ ಕೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ರಸ್ತೆ ಸಂಚಾರದಲ್ಲಿ ತೊಂದರೆ ಉಂಟಾಗುವ ನಿರೀಕ್ಷೆಯೂ ಇದೆ.

ಇದನ್ನು ಓದಿ : ಅಧಿಕಾರಿಗಳಿಂದ ಸಿಗದ ಸ್ಪಂದನೆ | ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ರೈತರು




