Chikkamagaluru : ಪತಿಯೇ ಪತ್ನಿಯನ್ನು ಚಾಕು ಇರಿದು ಹತ್ಯೆಗೈದಿರುವ ಘಟನೆ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಪತಿಯೇ ತನ್ನ ಪತ್ನಿಯನ್ನು ಚಾಕು ಇರಿದು ಕೊಲೆ ಮಾಡಿದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ಮಹಿಳೆ ನೇತ್ರಾ
ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು ಗುರುತಿಸಲಾಗಿದೆ. ಐದು ತಿಂಗಳ ಹಿಂದಷ್ಟೇ ನೇತ್ರಾ ವಿವಾಹವಾಗಿದ್ದರು. ನವೀನ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಐದು ತಿಂಗಳ ಹಿಂದಷ್ಟೇ ಇವರಿಬ್ಬರ ಮದುವೆಯಾಗಿತ್ತು.
ತವರು ಮನೆಗೆ ಹೋಗಿದ್ದ ಪತ್ನಿಗೆ ಚಾಕು ಇರಿತ
ಮೂರು ತಿಂಗಳ ಹಿಂದೆ ಪತಿ ಜೊತೆ ಜಗಳವಾಡಿದ್ದ ನೇತ್ರಾ, ತವರು ಸೇರಿಕೊಂಡಿದ್ದಳು. ಈ ವೇಳೆ ಆಕೆಯ ತವರು ಮನೆಗೆ ಹೋಗಿ ನವೀನ್, ನೇತ್ರಾಳಿಗೆ ಚಾಕು ಇರಿದಿದ್ದಾನೆ ಎಂದು ಆಕೆಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : ಹೆಗ್ಗೆರೆ ಗ್ರಾ.ಪಂಚಾಯಿತಿಯಲ್ಲಿ ಸಮಸ್ಯೆಗಳ ತಾಂಡವ..!?

ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ನೇತ್ರಾ
ಇನ್ನು ಗಂಭೀರವಾಗಿ ಗಾಯಗೊಂಡ ನೇತ್ರಾಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ.
ಆರೋಪಿಯ ವಿರುದ್ಧ ಪೊಲೀಸ್ ದೂರು ದಾಖಲು
ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ನವೀನ್ ವಿರುದ್ಧ ಕೊಲೆ ಆರೋಪ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕುಟುಂಬದ ಆಕ್ರೋಶ, ನ್ಯಾಯಕ್ಕಾಗಿ ಹೋರಾಟ
ಹತ್ಯೆಯಾದ ನೇತ್ರಾಳ ಪೋಷಕರು ಆರೋಪಿಗ ನವೇನ್ಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಪ್ರಕರಣವು ಸ್ಥಳೀಯರಲ್ಲಿ ತೀವ್ರ ಚರ್ಚೆ ಮತ್ತು ಆಕ್ರೋಶವನ್ನು ಹುಟ್ಟುಹಾಕಿದೆ.

ಇದನ್ನು ನೋಡಿ : ತಿಂಗಳ ಹಿಂದಷ್ಟೇ ಮದುವೆ – ಜಗಳವಾಡಿ ತವರು ಸೇರಿದ್ದ ಪತ್ನಿಯನ್ನು ಇರಿದು ಕೊಂದ ಪತಿ




