Dharwada Accident : ಇಂದು ಬೆಳಗಿನ ಜಾವ ಧಾರವಾಡ ಜಿಲ್ಲೆಯ ಗರಗ ಪೊಲೀಸ್ ಠಾಣೆ ವ್ಯಾಪ್ತಿಯ ಮುಲ್ಲಾ ಡಾಬಾ ಬಳಿ ಭೀಕರ ಅಪಘಾತ ಸಂಭವಿಸಿದೆ.

ಇಂದು ಬೆಳಗಿನ ಜಾವ ಧಾರವಾಡ ಜಿಲ್ಲೆಯ ಗರಗ ಪೊಲೀಸ್ ಠಾಣೆ ವ್ಯಾಪ್ತಿಯ ಮುಲ್ಲಾ ಡಾಬಾ ಬಳಿ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಗದಗ ಜಿಲ್ಲೆಯ ಹುಡ್ಕೋ ಕಾಲನಿಯ ನಿವಾಸಿಗಳಾದ ಮಹಾಂತಮ್ಮ ಬಸವಣೆಪ್ಪ ತುಪ್ಪದ (95) ಮತ್ತು ಸುರೇಶ ಬಸವಣೆಪ್ಪ ತುಪ್ಪದ (52) ಎಂದು ಗುರುತಿಸಲಾಗಿದೆ.

ಅಪಘಾತ ಸಂಭವಿಸಿದಾಗ, ಕ್ರೂಸರ್ ವಾಹನದಲ್ಲಿದ್ದ ಎಲ್ಲರೂ ಕೊಲ್ಲಾಪುರದ ಮಹಾಲಕ್ಷ್ಮೀ ದೇವಾಲಯ ಹಾಗೂ ಬಾಳು ಮಾಮಾನ ದರ್ಶನ ಪಡೆದು ತಮ್ಮ ಊರಿಗೆ ಹಿಂದಿರುಗುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಇನ್ನು ಅಪಘಾತದ ರಭಸಕ್ಕೆ ಕ್ರೂಸರ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ತಕ್ಷಣ ಗರಗ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನು ಓದಿ : ಕಾರಿನ ಗ್ಲಾಸ್ ಒಡೆದು ದೋಚ್ತಾರೆ ಖದೀಮರು – ಪ್ರಯಾಣಿಕರೇ ಎಚ್ಚರ!




