Nelamangala : ಸ್ನೇಹಿತರೊಂದಿಗೆ ಈಜಲು ಹೋಗಿದ್ದ 17ರ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಿತ್ತನಹಳ್ಳಿಯ ಬೋಳಾರೆ ಕ್ವಾರೆಯಲ್ಲಿ ನಡೆದಿದೆ.

ಸ್ನೇಹಿತರೊಂದಿಗೆ ಈಜಲು ತೆರಳಿದ 17 ವರ್ಷದ ಬಾಲಕನೊಬ್ಬ ಬೋಳಾರೆ ಕ್ವಾರಿಯಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುಃಖದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿತ್ತನಹಳ್ಳಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಕಾಮಾಕ್ಷಿಪಾಳ್ಯದ ಕಾವೇರಿಪುರ ನಿವಾಸಿ ಪೃತ್ವಿಕ್ (17) ಎಂದು ಗುರುತಿಸಲಾಗಿದೆ. ರಾಜಾಜಿನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪೃತ್ವಿಕ್, ಭಾನುವಾರ (ಅ.12) ಮಧ್ಯಾಹ್ನ ಆರು ಸ್ನೇಹಿತರ ಜೊತೆ ಈಜಲು ಬೋಳಾರೆ ಕ್ವಾರೆಗೆ ತೆರಳಿದ್ದನು.
ಈಜು ಬರದಿದ್ದರೂ ಸ್ನೇಹಿತರ ಒತ್ತಾಯಕ್ಕೆ ಮಣಿದ ಪೃತ್ವಿಕ್ ನೀರಿಗೆ ಇಳಿದ ಕೆಲವೇ ಕ್ಷಣಗಳಲ್ಲಿ ನೀರಿನಲ್ಲಿ ಮುಳುಗಿದ್ದಾನೆ. ಘಟನೆ ನಡೆದ ತಕ್ಷಣ, ಆತಂಕಗೊಂಡ ಸ್ನೇಹಿತರು ಸ್ಥಳದಿಂದ ಪರಾರಿಯಾದರೆಂದು ತಿಳಿದುಬಂದಿದೆ.
ಸದ್ಯ ಮೃತ ಬಾಲಕನ ಪೋಷಕರು ಸ್ನೇಹಿತರಿಂದಲೇ ತಮ್ಮ ಮಗ ಸಾವನ್ನಪ್ಪಿರುವುದಾಗಿ ಆರೋಪಿಸಿದ್ದು, ಬಾಳಿ ಬದುಕಬೇಕಿದ್ದ ಬಾಲಕ ಹುಡುಗರ ಸಹವಾಸದಿಂದ ಸಾವನ್ನಪ್ಪಿದ್ದಾನೆ ಎಂದು ಆಕ್ರೋಶ ಹೊರಹಾಕಿದ್ದಾರೆ
ಇನ್ನು ಈ ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಇದನ್ನು ಓದಿ : ದೇವೇಗೌಡ ಆರೋಗ್ಯದಲ್ಲಿ ಸುಧಾರಣೆ – ಆಸ್ಪತ್ರೆಯಿಂದ ಡಿಸ್ಚಾರ್ಜ್




