Karur Stampded : ನಟ ಹಾಗೂ ರಾಜಕಾರಣಿ ವಿಜಯ್ ಅವರ ಕರೂರು ರ್ಯಾಲಿಯಲ್ಲಿ ನಡೆದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ

ನಟ ಹಾಗೂ ರಾಜಕಾರಣಿ ವಿಜಯ್ ಅವರ ಕರೂರು ರ್ಯಾಲಿಯಲ್ಲಿ ನಡೆದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಜೊತೆಗೆ ತನಿಖೆಯ ಮೇಲ್ವಿಚಾರಣೆ ನಡೆಸುವ ಸಮಿತಿಯ ಮುಖ್ಯಸ್ಥರನ್ನಾಗಿ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರನ್ನು ನೇಮಿಸಿದೆ.
ಸೆಪ್ಟಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ಟಿವಿಕೆ (ತಮಿಳಗ ವೆಟ್ರಿ ಕಳಗಂ) ಪಕ್ಷದ ಮುಖ್ಯಸ್ಥ ಮತ್ತು ನಟ ವಿಜಯ್ ಅವರ ಸಾರ್ವಜನಿಕ ಕಾರ್ಯಕ್ರಮದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿ ದ್ದರು. ಈ ಪ್ರಕರಣ ದೇಶಾದ್ಯಂತ ಭಾರಿ ಸುದ್ದಿಯಾಗಿತ್ತು. ಈ ಕಾಲ್ತುಳಿತ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿ ಸುವಂತೆ ಕೋರಿ ಬಿಜೆಪಿ ನಾಯಕಿ ಹಾಗೂ ಕೌನ್ಸಿಲರ್ ಉಮಾ ಆನಂದನ್ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ.
ಇದನ್ನುಓದಿ : ಬಿಗ್ ಬಾಸ್ನಲ್ಲಿ ಜಂಟಿ-ಒಂಟಿ ಆಟ ದಿಢೀರ್ ಸ್ಟಾಪ್

ಇದಕ್ಕೂ ಮುನ್ನ ಭೀಕರ ಕಾಲ್ತುಳಿತ ಘಟನೆಯನ್ನು ಕೇಂದ್ರ ತನಿಖಾ ದಳ (ಸಿಬಿಐ)ದ ತನಿಖೆಗೆ ಕೋರಿದ್ದ ಅರ್ಜಿ ಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಅರ್ಜಿದಾರರು ಮತ್ತು ಸಂತ್ರಸ್ತ ಕುಟುಂಬ ಸದಸ್ಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಕಾಲ್ತುಳಿತ ಪ್ರಕರಣದ ತನಿಖೆ ನಡೆಸುತ್ತಿರುವುದು ತೃಪ್ತಿ ತಂದಿಲ್ಲ. ಹಾಗಾಗಿ, ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದೆ ಎಂದು ಅರ್ಜಿದಾರರಾದ ಉಮಾ ಆನಂದನ್ ಅವರು ಸುಪ್ರೀಂ ಕೋರ್ಟ್ ನಲ್ಲಿ ವಾದಿಸಿದ್ದರು.
ಸೆಪ್ಟಂಬರ್ 27ರಂದು ಕರೂರಿನಲ್ಲಿ ಟಿವಿಕೆ ನಾಯಕ ವಿಜಯ್ ನಡೆಸಿದ ಪ್ರಚಾರ ರ್ಯಾಲಿಯಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 41 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಈ ಪ್ರಕರಣ ಸಂಬಂಧ ಸದ್ಯ ಎಸ್ಐಟಿ ತನಿಖೆ ನಡೆಯುತ್ತಿದೆ.





