
BELAGAVI :ಚಿಕ್ಕೋಡಿಯ ಹುಕ್ಕೇರಿ ತಾಲ್ಲೂಕಿನ ಶಹಾಬಂದರ ಗ್ರಾಮದಲ್ಲಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಶಹಾಬಂಧರ ಗ್ರಾಮದ ಮಹಾಂತೇಶ್ ಬುಕನಟ್ಟಿ (24) ಕೊಲೆಯಾದ ಯುವಕನೆಂದು ಗುರುತಿಸಲಾಗಿದೆ.
ಮಹಾಂತೇಶ್ ಕೆಲಸ ಮುಗಿಸಿ ಊರಿಗೆ ವಾಪಸ್ ಬರುತ್ತಿದ್ದಾಗ ಬಸ್ ಇಳಿಯುತ್ತಿದ್ದ ಕ್ಷಣದಲ್ಲೇ ದುಷ್ಕರ್ಮಿಗಳು ಹಿಂದಿನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮಚ್ಚಿನಿಂದ ಅನೇಕ ಬಾರಿ ಕೊಚ್ಚಿ ಸ್ಥಳದಲ್ಲೇ ಕೊಲೆಗೈದಿದ್ದಾರೆ ಎನ್ನಲಾಗಿದೆ.
ಈ ಭೀಕರ ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಯಮಕನಮರಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.




