Chitradurga : ಭ್ರಷ್ಟಚಾರದ ಆರೋಪ ಕೇಳಿಬಂದ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗದಲ್ಲಿ ಅಧಿಕಾರಿಯ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಭ್ರಷ್ಟಚಾರದ ಆರೋಪ ಕೇಳಿಬಂದ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗದಲ್ಲಿ ಅಧಿಕಾರಿಯ ಮನೆ ಮೇಲೆ ದಾಳಿ ನಡೆಸಿ ಅಧಿಕಾರಿಗೆ ಶಾಕ್ ನೀಡಿದ್ದಾರೆ.
ಚಿತ್ರದುರ್ಗದ ಹೊಳಲ್ಕೆರೆ ಕೃಷಿ ಇಲಾಖೆಯ ಎಡಿ ಚಂದ್ರಕುಮಾರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಏಕಕಾಲಕ್ಕೆ ಚಂದ್ರಕುಮಾರ್ ಗೆ ಸಂಬಂಧಪಟ್ಟ ಮೂರು ಕಡೆಗಳಲ್ಲಿ ದಾಳಿ ಮಾಡಲಾಗಿದೆ. ಚಿತ್ರದುರ್ಗ ನಗರದ ಮನೆ, ಹೊಳಲ್ಕೆರೆಯ ಕಚೇರಿ ಹಾಗೂ ಟಿ.ನುಲೇನೂರು ಗ್ರಾಮದ ತೋಟದ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಇದನ್ನು ಓದಿ : ಮಣ್ಣಲ್ಲಿ ಮಣ್ಣಾದ ಹಾಸ್ಯ ಮಾಂತ್ರಿಕ ರಾಜು ತಾಳಿಕೋಟೆ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಚಂದ್ರಕುಮಾರ್ ಗೆ ಶಾಕ್ ನೀಡಿದ್ದಾರೆ. ಲೋಕಾಯುಕ್ತ ಎಸ್ ಪಿ ವಾಸುದೇವ್ ರಾಮ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಅಧಿಕಾರಿ ಚಂದ್ರಕುಮಾರ್ ಗೆ ಸೇರಿದ ಆಸ್ತಿಯ ಕುರಿತು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನು ನೋಡಿ : ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಅವಶ್ಯಕ – ಸಮುದಾಯದ ಜನಕ್ಕೆ ಕಿರೋಶ್ ಕರೆ




