Self Harming : ಉಡುಪಿ ಜಿಲ್ಲೆಯ ಬಾರ್ಕೂರಿನಲ್ಲಿ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನು ನೋಡಿ : ಕಲ್ಯಾಣ ಕರ್ನಾಟಕದಲ್ಲಿ 2 ದಿನ ನಿರ್ಮಲಾ ಸೀತರಾಮನ್ ಪ್ರವಾಸ
Self Harming: ಮಾಜಿ ಶಾಸಕರ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ
ಉಡುಪಿ (Udupi) ಜಿಲ್ಲೆಯ ಕಾರ್ಕಳದ (Karkala) ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.
Sudeep Bhandari ಅತ್ಯಂತ ಸರಳ ವ್ಯಕ್ತಿತ್ವದವರು
ಮೃತ ಸುದೀಪ್ ಭಂಡಾರಿ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸುತ್ತಿದ್ದರು. ಸ್ಥಳೀಯರು ಹೇಳುವಂತೆ ಅವರು ಅತ್ಯಂತ ಸರಳ ವ್ಯಕ್ತಿತ್ವದವರು. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಸುದೀಪ್ ಭಂಡಾರಿ ಅವರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.ಘಟನೆಯ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಿ. ಗೋಪಾಲ ಭಂಡಾರಿ ಸಜ್ಜನ ರಾಜಕಾರಣಿ
ಮೃತ ಸುದೀಪ್ ಭಂಡಾರಿ ಅವರ ತಂದೆ ದಿ. ಗೋಪಾಲ ಭಂಡಾರಿ ಅವರು ಕಾರ್ಕಳ ಕ್ಷೇತ್ರದಿಂದ ಎರಡು ಬಾರಿ (1999–2004 ಮತ್ತು 2008–2013) ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಸೇವೆ ಸಲ್ಲಿಸಿದ್ದರು.ಸಜ್ಜನ ರಾಜಕಾರಣಿ ಎಂದೇ ಖ್ಯಾತರಾಗಿದ್ದ ಅವರು 2019ರ ಜುಲೈ 4ರಂದು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಹೃದಯಾಘಾತದಿಂದ ನಿಧನರಾಗಿದ್ದರು.
ಇದನ್ನು ಓದಿ : ಸ್ಪಂದನಾ ನಿರ್ಧಾರದಿಂದ ಎಲ್ಲ ಟಾಸ್ಕ್ನಿಂದ ಧ್ರುವಂತ್ ಬ್ಲಾಕ್




