Shivamogga : ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಂಗಳವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ರಸ್ತೆಯಲ್ಲಿರುವ ಆನಂದಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲಂದೂರಿನ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ನೆನ್ನೆ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟಕದಲ್ಲಿ ತೀವ್ರ ಬೆಂಕಿ ಕಾಣಿಸಿಕೊಂಡಿದ್ದು ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ.
ಈ ಘಟನೆಯು ಮಲಂದೂರು ಘಟಕದಲ್ಲಿ ಈವರೆಗೂ ಸಂಭವಿಸಿರುವ ಮೂರನೇ ಬೆಂಕಿ ಅವಘಡವಾಗಿದೆ. ಸೂಕ್ತ ನಿರ್ವಹಣೆಯ ಕೊರತೆಯಿಂದಲೇ ಪುನಃಪುನಃ ಈ ರೀತಿಯ ಘಟನೆಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ನೋಡಿ : ಆನಂದಪುರ ಗ್ರಾಪಂನ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ಅವಘಡ
ಇನ್ನು ಘಟನೆ ಸಂಭವಿಸಿದ ಕೂಡಲೇ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಗುರುರಾಜ್ ಸ್ಥಳಕ್ಕೆ ಧಾವಿಸಿ, ಸಿಬ್ಬಂದಿಗಳ ಸಹಕಾರದಿಂದ ಬೆಂಕಿ ನಂದಿಸಲು ಯತ್ನಿಸಿದರು. ಆದರೆ ಬೆಂಕಿಯ ತೀವ್ರತೆ ಇತರ ಚಟುವಟಿಕೆಗಳಿಗೆ ಅವಕಾಶ ವಿಲ್ಲದೆ ಮಾಡಿದ ಪ್ರಯತ್ನ ವಿಫಲವಾಯಿತು. ಬಳಿಕ ತಕ್ಷಣವೇ ಸಾಗರದಿಂದ ಅಗ್ನಿಶಾಮಕ ದಳವನ್ನು ಕರೆಸಲಾಗಿದ್ದು, ಅಧಿಕಾರಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಕಠಿಣ ಶ್ರಮವಹಿಸಿದರು.
ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅಧ್ಯಕ್ಷ ಕೆ. ಗುರುರಾಜ್, “ಇದು ಸುಪ್ರಾಯೋಜಿತ ಬೆಂಕಿ ಹಚ್ಚುವಿಕೆಯಾಗಿದೆ. ದುರುದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಈ ಕೃತ್ಯ ಎಸಗಿರುವ ಶಂಕೆ ಇದೆ. ಈ ಘಟನೆಯಿಂದಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ,” ಎಂದು ತಿಳಿಸಿದರು.ಇನ್ನು ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಇದನ್ನು ಓದಿ : ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್




