Bengaluru : ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜ್ವೊಂದರಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜ್ವೊಂದರಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅದೇ ಕಾಲೇಜಿನ ಜ್ಯೂನಿಯರ್ ವಿದ್ಯಾರ್ಥಿ ಜೀವನ್ ಗೌಡ ಎಂಬುವವರು ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದ ಮೇಲೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಘಟನೆ ವಿವರ
ಅಕ್ಟೋಬರ್ 10 ರಂದು ಬೆಳಿಗ್ಗೆ ತರಗತಿಗೆ ಹಾಜರಾಗಿದ್ದ ಸಂತ್ರಸ್ತೆ, ಆರೋಪಿ ಜೀವನ್ ಗೌಡನಿಂದ ಕೆಲವೊಂದು ವಸ್ತುಗಳನ್ನು ಪಡೆದಿದ್ದು, ಲಂಚ್ ಬ್ರೇಕ್ ಸಮಯದಲ್ಲಿ ಕಲೆಕ್ಟ್ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಳು. ನಂತರ, ಲಂಚ್ ಬ್ರೇಕ್ನಲ್ಲಿ ಇಬ್ಬರು ಭೇಟಿ ಮಾಡಿದ್ದು, ಆರೋಪಿ ‘ಸ್ವಲ್ಪ ಮಾತಾಡೋಣ’ ಎಂಬ ನೆಪದಲ್ಲಿ ಅವಳನ್ನು ಕೆಳಮಹಡಿಗೆ ಕರೆದುಕೊಂಡು ಹೋಗಿದ್ದಾನೆ.
ಅಲ್ಲಿಂದ, ಆರೋಪಿ ಜೀವನ್ ತನ್ನ ಮನವಿಯಂತೆ ಆಕೆಯನ್ನು 7ನೇ ಮಹಡಿಯ ಪಿಜಿ ಬ್ಲಾಕ್ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ, ಆಕೆಗೆ ಕಿಸ್ ಮಾಡಲು ಯತ್ನಿಸಿದಾಗ, ಆಕೆ ತಡೆದಿದ್ದರೂ ಆತನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬಳಿಕ ಆಕೆಯನ್ನು ಹಿಂಬಾಲಿಸಿ 6ನೇ ಮಹಡಿಗೆ ಕರೆದುಕೊಂಡು ಹೋಗಿ, ಪುರುಷರ ಶೌಚಗೃಹದೊಳಗೆ ಎಳೆದೊಯ್ದು ಬಲವಂತವಾಗಿ ಬಾಗಿಲು ಲಾಕ್ ಮಾಡಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಸ್ಪಷ್ಟಿಸಲಾಗಿದೆ.

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯ
ಪೊಲೀಸರಿಗೆ ನೀಡಿರುವ ಮಾಹಿತಿಯ ಪ್ರಕಾರ, ಜೀವನ್ ಗೌಡ ಆಕೆಯ ಮೇಲೆ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ಬಲವಂತವಾಗಿ ಎಳೆದುಕೊಂಡು ಹೋಗಿ ಆಕ್ರಮಣ ನಡೆಸಿದ್ದಾನೆ. ಈ ದುರ್ಘಟನೆ ಇಡೀ ಕಾಲೇಜಿನಲ್ಲಿ ಆತಂಕ ಸೃಷ್ಟಿಸಿದೆ.
ಪೊಲೀಸರ ಕ್ರಮ
ಸಂತ್ರಸ್ತೆ ಈ ಬಗ್ಗೆ ತಮ್ಮ ಆಪ್ತ ಸ್ನೇಹಿತರಿಗೆ ಮಾಹಿತಿ ನೀಡಿದಾಗ, ಅವರು ಧೈರ್ಯ ತುಂಬಿ ಪೋಷಕರಿಗೆ ತಿಳಿಸಲು ಸಹಾಯ ಮಾಡಿದ್ದಾರೆ. ನಂತರ ಹನುಮಂತನಗರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಾಗಿದೆ. ಪೊಲೀಸರು ಕೂಡಲೇ ತನಿಖೆ ಆರಂಭಿಸಿ ಆರೋಪಿ ಜೀವನ್ ಗೌಡನನ್ನು ಬಂಧಿಸಿದ್ದಾರೆ. ಇನ್ನು ಈ ಬಗ್ಗೆ ತನಿಖೆ ಮುಂದುವರಿಯುತ್ತಿದೆ.
ಸಾಮಾಜಿಕ ಪ್ರತಿಕ್ರಿಯೆ
ಈ ಘಟನೆ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳಲ್ಲಿ ಭಯದ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿನಿಯರ ಸುರಕ್ಷತೆಗೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಕಾಲೇಜು ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾ, ಮಹಿಳಾ ಸುರಕ್ಷಾ ಅಧಿಕಾರಿ ನೇಮಕ, ಹಾಗೂ ಮಾನಸಿಕ ಸಮಾಲೋಚನೆ ವ್ಯವಸ್ಥೆಗಳನ್ನು ಗಂಭೀರವಾಗಿ ಪರಿಗಣಿಸಲು ಆಗ್ರಹ ವ್ಯಕ್ತವಾಗಿದೆ.
ಇದನ್ನು ನೋಡಿ : SERVICE ROAD ಆಯ್ತುPARKING SPOT ರಸ್ತೆಯಲ್ಲೇ ಲಾರಿಗಳು ನಿಂತಿದ್ರು DONT CARE





