Kaveri Theerthodbhava: ಕಾವೇರಿ ತೀರ್ಥೋದ್ಭವಕ್ಕೆ ತಲಕಾವೇರಿ ಕ್ಷೇತ್ರದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿವೆ. ವರ್ಷಕ್ಕೊಮ್ಮೆ ನಡೆಯುವ ಈ ತೀರ್ಥೋದ್ಭವ ವೀಕ್ಷಿಸಲು ಜನರು ಅಪಾರ ಪ್ರಮಾಣದಲ್ಲಿ ಆಗಮಿಸುತ್ತಿದ್ದಾರೆ.

Kaveri Theerthodbhava: ಕರುನಾಡಿಗೆ ಜೀವನಾಡಿಯಂತಿರುವ ಕಾವೇರಿ ನದಿಯ ತೀರ್ಥೋದ್ಭವಕ್ಕೆ ಸಜ್ಜಾಗಿದೆ. ಕೊಡಗಿನ ಪವಿತ್ರ ಕ್ಷೇತ್ರ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಈ ಪುಣ್ಯ ಸಂದರ್ಭವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ತಲಕಾವೇರಿಗೆ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ : ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ..
ದಕ್ಷಿಣ ಭಾರತದ ಗಂಗೆ ಎಂದು ಕರೆಯಲ್ಪಡುವ ಕಾವೇರಿ ನದಿಯ ಉಗಮಸ್ಥಾನದಲ್ಲಿ ವರ್ಷಕ್ಕೊಮ್ಮೆ ಸಂಭವಿಸುವ ಈ ಕ್ಷಣಕ್ಕೆ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಜಿಲ್ಲಾಡಳಿತ ಮತ್ತು ದೇವಸ್ಥಾನ ಸಮಿತಿಯು ಮಾಸಪೂರ್ತಿ ನಡೆಯಲಿರುವ ತುಲಾ ಸಂಕ್ರಮಣ ಜಾತ್ರೆಗಾಗಿ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
MUST WATCH : ಕ್ರೀಡೆ ವ್ಯಕ್ತಿತ್ವವನ್ನು ವಿಕಸಿಸುತ್ತೆ ಶಾಸಕ ಸಿ.ಬಿ.ಸುರೇಶ್ ಬಾಬು ಕರೆ | CHIKKANAYAKANAHALLI NEWS |
ಇನ್ನು ಜನರ ನೂಕುನುಗ್ಗಲು ನಿಯಂತ್ರಣಕ್ಕಾಗಿ ಬ್ಯಾರಿಕೇಡ್ಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ದೇ ದರ್ಶನಕ್ಕಾಗಿ ಏಕಮುಖ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಆರಂಭವಾಗಲಿದ್ದು, ಅರ್ಚಕರ ತಂಡ ತೀರ್ಥಸ್ವರೂಪಿಣಿಯಾದ ಕಾವೇರಿ ತಾಯಿಯ ಸ್ವಾಗತಕ್ಕೆ ಸಜ್ಜಾಗಿದೆ.




