Weather Report : ರಾಜ್ಯದಲ್ಲಿ ನಾಳೆಯೂ ವರುಣ ಅಬ್ಬರಿಸಲಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದ ಕೆಲವು ತಾಲೂಕುಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

Weather Report: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ (ಅ.18) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವರುಣನ ಅಬ್ಬರ ಮುಂದುವರಿಯುವ ಲಕ್ಷಣಗಳು ಕಂಡುಬಂದಿದ್ದು, ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಇನ್ನು ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದ್ದು, ಬೆಂಗಳೂರು ನಗರದಲ್ಲಿಯೂ ನಾಳೆ ಮಳೆ ಸುರಿಯುವ ಸಾಧ್ಯತೆ ಇದೆ. ಮಳೆಯ ಸಾಧ್ಯತೆ ಶೇಕಡಾ 69ರಿಂದ 100ರಷ್ಟು ಇರುತ್ತದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶದ ಕೆಲವು ತಾಲೂಕುಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಭಾಗದಲ್ಲಿ ಮಾತ್ರ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ. ಕರಾವಳಿ ಪ್ರದೇಶದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಅಲ್ದೇ ಹವಾಮಾನ ವೈಪರೀತ್ಯದ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.




