
BIDAR THEFT : ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಬಾಲಾಜಿ ನಗರದಲ್ಲಿ ಮನೆಯ ಬೀಗ ಮುರಿದು ಕಳ್ಳರು ಸುಮಾರು ₹10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ 250 ಗ್ರಾಂ ಬೆಳ್ಳಿ ಆಭರಣ ಗಳನ್ನುಕಳ್ಳತನ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಕಳ್ಳತನವಾಗಿರುವ ಮನೆ ಜಾಲೇಂದರ್ ಭೀಮಣ್ಣ ಮತ್ರೆ ಎಂಬುವವರಿಗೆ ಸೇರಿದ್ದು, ಅವರು ಮನೆಯ ಲ್ಲಿಲ್ಲದ ಸಮಯದಲ್ಲಿ ಕಳ್ಳತನ ಮಾಡಿದ್ದಾರೆ. ಮನೆಗೆ ವಾಪಸ್ಸು ಬಂದ ಮಾಲೀಕರು ಬೀಗ ಮುರಿದು ಮನೆಯ ಒಳಗಿರುವ ವಸ್ತುಗಳು ಕಳವಾಗಿರುವುದನ್ನು ಕಂಡು ಕೂಡಲೇ ಭಾಲ್ಕಿ ನಗರ ಪೊಲೀಸ್ ಠಾಣೆಗೆದೂರು ನೀಡಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ತಕ್ಷಣವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ವಾನದಳದಿಂದ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.




