Smriti Mandhana : ಇಂಡಿಯಾದ ವುಮೆನ್ಸ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ಅವರು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಭಾರತದ ಆರಂಭಿಕ ಬ್ಯಾಟ್ಸ್ವುಮನ್ ಸ್ಮೃತಿ ಮಂದಾನ ಹಾಗೂ ಮಧ್ಯಪ್ರದೇಶದ ಇಂದೋರ್ ಮೂಲದ ಮ್ಯೂಸಿಕ್ ಡೈರೆಕ್ಟರ್ ಹಾಗೂ ಸಿನಿಮಾ ನಿರ್ಮಾಪಕ ಪಲಾಶ್ ಮುಚ್ಚಲ್ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಈ ವಿಷಯವನ್ನು ಪಲಾಶ್ ಮುಚ್ಚಲ್ ಸ್ವತಃ ಘೋಷಿಸಿದ್ದು, “ನಾವು ಶೀಘ್ರದಲ್ಲೇ ಮದುವೆಯಾಗಲಿದ್ದೇವೆ” ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಫೋಟೋಗಳು ವೈರಲ್
ಸ್ಮೃತಿ ಮಂದಾನ ಹಾಗೂ ಪಲಾಶ್ ಮುಚ್ಚಲ್ ತಮ್ಮ ಸಂಬಂಧವನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದು, ಇನ್ಸ್ಟಾಗ್ರಾಂನಲ್ಲಿ ಅವರ ಜೋಡಿಯ ಹಲವಾರು ಫೋಟೋಗಳು ಹರಿದಾಡುತ್ತಿವೆ. ಈ ಮೂಲಕ ಸ್ಮೃತಿ ಶೀಘ್ರದಲ್ಲೇ ಇಂದೋರ್ನ ಸೊಸೆಯಾಗಲಿದ್ದಾರೆ ಎಂಬುದು ಖಚಿತವಾಗಿದೆ.
ಇದನ್ನು ನೋಡಿ : ಆಟಗಾರ್ತಿ ಸ್ಮೃತಿ ಮಂದಾನ ಮದುವೆ.. ಹುಡುಗ ಯಾರು..?

ಟೀಮ್ ಇಂಡಿಯಾ ತಂಡಕ್ಕೆ ಶುಭಾಶಯ
ವಿಶ್ವಕಪ್ ಪಂದ್ಯಕ್ಕೂ ಮುನ್ನ ಮಾತನಾಡಿದ ಪಲಾಶ್ ಮುಚ್ಚಲ್, ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡಲಿ ಹಾಗೂ ಟ್ರೋಫಿ ಗೆಲ್ಲಲಿ ಎಂಬ ಹಾರೈಕೆಯನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಟೀಮ್ ಇಂಡಿಯಾ ತಂಡ 4 ಪಂದ್ಯಗಳಲ್ಲಿ 2 ಗೆಲುವು ಮತ್ತು 2 ಸೋಲುಗಳನ್ನು ದಾಖಲಿಸಿದೆ.
ವಿಶ್ವಕಪ್ನ ಮಧ್ಯದಲ್ಲಿ ಸ್ಮೃತಿಯ ವೈವಾಹಿಕ ಜೀವನದ ಸುದ್ದಿಯು ಕ್ರಿಕೆಟ್ ಅಭಿಮಾನಿಗಳಲ್ಲೂ ಕುತೂಹಲ ಹುಟ್ಟಿಸಿದೆ. ತಮ್ಮ ಇನ್ಸ್ಟಾಗ್ರಾಂ ಖಾತೆ ಮೂಲಕ ಸ್ಮೃತಿ ಮಾಧ್ಯಮಗಳಲ್ಲಿ ಅದೆಷ್ಟೋ ಬಾರಿ ತಮ್ಮ ವೈಯಕ್ತಿಕ ಜೀವನದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಇದನ್ನು ಓದಿ : ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ಸಾವು




