
TUMAKURU : ತುಮಕೂರು ಜಿಲ್ಲೆ ಹೆತ್ತೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೈದಾಳ ಗ್ರಾಮದ ಶ್ರೀ ಚೆನ್ನಕೇಶವ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಹೀ ಸೇವಾ-2025 ರ ಅಭಿಯಾನಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಜಿ. ಪ್ರಭು ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಜಿ. ಪ್ರಭು ನಾಗರೀಕತೆಗಳ ಕಾಲದಿಂದಲೂ ನಮ್ಮ ದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ. ಸ್ವಚ್ಛತೆ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕು ಹಸಿ ಕಸ, ಒಣ ಕಸ ವಿಂಗಡನೆ ಮಾಡಿ ಸ್ವಚ್ಛತಾ ವಾಹಿನಿಗೆ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಲಾಗಿದೆ. ಸರ್ಕಾರದಿಂದ ರಸ್ತೆ, ಚರಂಡಿ, ಶಾಲೆ, ಆಸ್ಪತ್ರೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ನೀಡಲಾಗುತ್ತಿದೆ. ಸ್ವಚ್ಛತಾ ಪರಿಸರ ಕಾಪಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ, ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಕ್ಯಾನ್ಸರ್ ನಿಂದ ದೂರವಿರಬೇಕು ಎಂದರು.
ಇನ್ನು ಅಭಿಯಾನದ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿಗಳಾದ ಸಣ್ಣ ಮಸೀಯಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಧನಲಕ್ಷ್ಮಿ, ಮಾಜಿ ಉಪಾಧ್ಯಕ್ಷರಾದ ಉಮಾ ಶಂಕರ್ ಸೇರಿ ಹಲವರು ಮಂದಿ ಉಪಸ್ಥಿತರಿದ್ದರು.





