Accident : ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

ತಾಯಿ ಹಾಸನಾಂಬೆ ದೇವಿಯ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ.
ಅಪಘಾತದ ವಿವರ
ಬೆಂಗಳೂರು ಮೂಲದ ಬಸವರಾಜು ತನ್ನ ಸ್ನೇಹಿತೆಯರಾದ ಅನು (19) ಮತ್ತು ಛಾಯಾ (20) ಜೊತೆ ಯಮಹಾ ಬೈಕ್ನಲ್ಲಿ ಹಾಸನಾಂಬ ದರ್ಶನಕ್ಕೆ ಬಂದಿದ್ದರು. ದರ್ಶನ ಮುಗಿಸಿ, ಮೂವರು ಒಂದೇ ಬೈಕ್ನಲ್ಲಿ ಹಿಂದಿರುಗುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಕಡೆಯಿಂದ ವೇಗವಾಗಿ ಬಂದ ಇನ್ನೋವಾ ಕಾರು, ಹೌಸಿಂಗ್ ಬೋರ್ಡ್ ಬಳಿ ಮೊದಲಿಗೆ ಆಕ್ಟಿವಾ ಸ್ಕೂಟರ್ಗೆ ಡಿಕ್ಕಿ ಹೊಡೆದು, ಬಳಿಕ ಈ ಮೂವರು ಸವಾರರಾಗಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ.
ಇದನ್ನು ಓದಿ : ಕಿಚ್ಚ ಸುದೀಪ್ಗೆ ಸರ್ಪೈಸ್ ಕೊಟ್ಟ ಬಿಗ್ಬಾಸ್

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿ ಇದ್ದ ಬಸವರಾಜು ಮತ್ತು ಅನುಶ್ರೀ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡ ಛಾಯಾವನ್ನು ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಕ್ಟಿವಾ ಸವಾರ ಮೊಹಮ್ಮದ್ ಶಾಹಿದ್ ಕೂಡ ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಲೀಸರಿಂದ ಪರಿಶೀಲನೆ
ಇನ್ನು ಘಟನೆ ಬಗ್ಗೆ ಮಾಹಿತಿ ಪಡೆದ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿ ಮುಂದಿನ ತನಿಖೆ ಪ್ರಾರಂಭಿಸಲಾಗಿದೆ.

ಇದನ್ನು ನೋಡಿ : ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ




