Karnataka Weather : ದೀಪಾವಳಿ ಸಂಭ್ರಮದಲ್ಲಿರುವ ಕರ್ನಾಟಕ ಮಂದಿಗೆ ಮಳೆರಾಯ ಅಡ್ಡಿಯಾಗಿದ್ದಾನೆ.

ದೀಪಾವಳಿ ಸಂಭ್ರಮದಲ್ಲಿರುವ ಕರ್ನಾಟಕ ಮಂದಿಗೆ ಮಳೆರಾಯ ಅಡ್ಡಿಯಾಗಿದ್ದಾನೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Karnataka Weather : ಮಳೆಯ ಅಬ್ಬರ ಹೆಚ್ಚುವ ಸಾಧ್ಯತೆ
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೀನುಗಾರಿಗೆ ಎಚ್ಚರಿಕೆ
ಕರಾವಳಿಯಲ್ಲಿ ಗಾಳಿಯು ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲೆಗಳ ಎತ್ತರ ಹೆಚ್ಚುವ ಸಾಧ್ಯತೆ ಇರುವ ಕಾರಣ ಕಡಲತೀರದ ನಿವಾಸಿಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದನ್ನು ಓದಿ : GT ಮಾಲ್ನ 3ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ನಗರಗಳಲ್ಲಿ ಸಂಚಾರದ ಅಡಚಣೆ
ಆಕಸ್ಮಿಕ ಮಳೆಯಿಂದ ನಗರಗಳಲ್ಲಿ ರಸ್ತೆಗಳ ಮೇಲೆ ನೀರು ನಿಂತು ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು ತಮ್ಮ ಪ್ರಯಾಣವನ್ನು ಯೋಜಿತವಾಗಿ ಕೈಗೊಳ್ಳುವಂತೆ ಸೂಚಿಸಲಾಗಿದೆ. ಗ್ರಾಮೀಣ ಭಾಗಗಳಲ್ಲಿ ರೈತರು ತಮ್ಮ ಬೆಳೆ ಮತ್ತು ಆಸ್ತಿಯ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.
ಮುಂದಿನ 24 ಗಂಟೆ ಕ್ರಿಟಿಕಲ್
ಇನ್ನು ಮುಂದಿನ 24 ಗಂಟೆಗಳ ಅವಧಿಯಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರಾಜ್ಯದ ಜನತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

ಇದನ್ನು ನೋಡಿ : ದೀಪಾವಳಿಗೆ ಬೆಂಗಳೂರು ಸೇರಿ ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಹಲೆವೆಡೆ ಭಾರಿ ಮಳೆ




