Karnataka Weather : ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ

ರಾಜ್ಯದ ಹವಾಮಾನ ತೀವ್ರವಾಗಿ ಬದಲಾವಣೆ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ 4 ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಇದರ ಬೆನ್ನಲ್ಲೇ ಅಕ್ಟೋಬರ್ 25ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
Karnataka Weather : ಎಲ್ಲಿ ಮಳೆ ?
ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಇದಲ್ಲದೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು-ಮಿಂಚು ಸಹಿತ ಮಳೆಸಾಧ್ಯತೆ ಇದೆ.
ಇದನ್ನು ನೋಡಿ : ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಸಾರ್ವಜನಿಕರಿಗೆ ಎಚ್ಚರಿಕೆ
ಇನ್ನು ಹವಾಮಾನ ಇಲಾಖೆ ಬಿಡುಗಡೆ ಮಾಡಿದ ವರದಿಯಂತೆ, ಮಳೆಯ ವೇಳೆ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದರಿಂದಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಹಾಗೂ ಅಗತ್ಯವಿದ್ದರೆ ಮಾತ್ರ ಹೊರಗೆ ಹೋಗುವಂತೆ ಸೂಚಿಸಲಾಗಿದೆ.
ಬೆಂಗಳೂರಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
ಬೆಂಗಳೂರು ನಗರದಲ್ಲಿಯೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 13-15 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ : ರಕ್ಷಿತಾ-ರಾಶಿಕಾ ನಡುವೆ ಹೊತ್ತಿ ಉರಿದ ಬೆಂಕಿ




