Mumbai : ಮಹಾರಾಷ್ಟ್ರದ ನವಿ ಮುಂಬೈನ ಬಹುಮಹಡಿ ವಸತಿ ಕಟ್ಟಡವೊಂದರಲ್ಲಿ ಮಧ್ಯರಾತ್ರಿ ಅಗ್ನಿ ಅವಘಡ ಸಂಭವಿಸಿದೆ.

ಮಹಾರಾಷ್ಟ್ರದ ನವಿ ಮುಂಬೈನ ಬಹುಮಹಡಿ ವಸತಿ ಕಟ್ಟಡವೊಂದರಲ್ಲಿಮಧ್ಯರಾತ್ರಿ ಭೀಕರ ಘಟನೆ ಸಂಭವಿಸಿದ್ದು, ಒಂದು ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ ನಾಲ್ವರು ನಾಲ್ಕು ಜನರು ಸಾವನ್ನಪ್ಪಿರುವ ದುರಂತ ನಡೆದಿದೆ. ಇನ್ನು ಈ ಘಟನೆಯಲ್ಲಿ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ವಿವರ
ವಾಶಿ ಪ್ರದೇಶದ ಸೆಕ್ಟರ್-14 ರಲ್ಲಿರುವ ರಹೇಜಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನ 10ನೇ ಮಹಡಿಯಲ್ಲಿ ರಾತ್ರಿ ಸುಮಾರು 12:30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದು ತಕ್ಷಣವೇ 11 ಮತ್ತು 12ನೇ ಮಹಡಿಗಳವರೆಗೆ ವ್ಯಾಪಿಸಿದೆ. ಘಟನೆ ವೇಳೆ ಅನೇಕ ಮಂದಿ ಒಳಗಡೆಯಲ್ಲೇ ಸಿಲುಕಿದ್ದರು.
ಇನ್ನು ಈ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಮತ್ತು 6 ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಗಾಯಗೊಂಡ ಹತ್ತು ಮಂದಿ ಈಗಾಗಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : CM ಭಾಗಿಯಾದ ಕಾರ್ಯಕ್ರಮದಲ್ಲಿ 13 ಮಂದಿ ಅಸ್ವಸ್ಥ

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ
ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಶ್ರಮದ ಬಳಿಕ ಬೆಂಕಿಯನ್ನು ನಂದಿಸಲು ಯಶಸ್ವಿಯಾದರು. ಈ ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಬೆಂಕಿಯ ಮೂಲ ಎಲ್ಲಿ ಎಂಬ ಬಗ್ಗೆ ಪೊಲೀಸರು ಹಾಗೂ ಅಗ್ನಿಶಾಮಕ ಅಧಿಕಾರಿಗಳು ಸಂಯುಕ್ತ ತನಿಖೆ ಆರಂಭಿಸಿದ್ದಾರೆ.
ಈ ಅಗ್ನಿ ಅವಘಡವು ಮತ್ತೊಮ್ಮೆ ಕಟ್ಟಡಗಳ ಭದ್ರತೆ ಹಾಗೂ ಅಗ್ನಿ ನಿರ್ವಹಣಾ ವ್ಯವಸ್ಥೆಗಳ ಕುರಿತ ಪ್ರಶ್ನೆಗಳನ್ನು ಎಬ್ಬಿಸಿದೆ.

ಇದನ್ನು ನೋಡಿ : ಬಹುಮಹಡಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ : ನಾಲ್ವರು ಮೃತ್ಯು, 10 ಜನರಿಗೆ ಗಾಯ




