Yash : ರಾಕಿಂಗ್ ಸ್ಟಾರ್ ಯಶ್ ಈ ವರ್ಷ ದೀಪಾವಳಿ ಹಬ್ಬವನ್ನು ಫ್ಯಾಮಿಲಿ ಜೊತೆ ಅದ್ಧೂರಿಯಾಗಿ ಆಚರಿಸಿದ್ದಾರೆ.

ಕನ್ನಡ ಚಿತ್ರರಂಗದ ಓನ್ ಆಂಡ್ ಓನ್ಲಿ ರಾಕಿಂಗ್ ಸ್ಟಾರ್, ರಾಖಿ ಭಾಯ್ ಯಶ್ ಈ ವರ್ಷ ದೀಪಾವಳಿ ಹಬ್ಬವನ್ನು ಫ್ಯಾಮಿಲಿ ಜೊತೆ ಅದ್ಧೂರಿಯಾಗಿ ಆಚರಿಸಿದ್ದಾರೆ. ನಟ ಯಶ್ ಮತ್ತು ರಾಧಿಕಾ ಪಂಡಿತ್ ಜೋಡಿ ಎಲ್ಲಾ ಹಬ್ಬಗಳನ್ನು ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ಹಾಗೇಯೇ ಆಚರಣೆ ಮಾಡಿದ ಪ್ರತಿ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಶುಭಾಷಯಗಳನ್ನು ಕೋರಿದ್ದಾರೆ. ಇದೀಗ ದೀಪಾವಳಿ ಹಬ್ಬದ ಪ್ರಯುಕ್ತ ತಮ್ಮ ಮಕ್ಕಳೊಂದಿಗೆ ಈ ಜೋಡಿ ಆಚರಿಸಿದೆ.

ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಮಕ್ಕಳು ಆಯ್ರಾ ಹಾಗೂ ಯಥರ್ವ್ ಜೊತೆ ಸೇರಿ ದೀಪಾವಳಿ ವಿಶ್ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆಯ್ರಾ ಹಾಗೂ ಯಥರ್ವ್ ಅವರ ಕನ್ನಡ ಗಮನ ಸೆಳೆದಿದೆ. ಇದು ವಿಶೇಷ ವಿಡಿಯೋ ಎಂದು ಅನೇಕರು ಪರಿಗಣಿಸಿದ್ದಾರೆ.
ಇದನ್ನು ನೋಡಿ : ದೀಪಾವಳಿ ವಿಶ್ ಮಾಡಿದ ಯಶ್-ರಾಧಿಕಾ ದಂಪತಿ ಮಕ್ಕಳು

ಮನೆ, ಸಂಸಾರ ಎಂದು ಮಕ್ಕಳ ಜೊತೆ ಫುಲ್ ಟೈಮ್ ಬ್ಯುಸಿಯಾಗಿರುವ ರಾಧಿಕಾ ಪಂಡಿತ್, ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಮೊಗ್ಗಿನ ಮನಸ್ಸು ಚಿತ್ರದ ಮೂಲಕ ನಾಯಕಿಯಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಗೆ ನಟಿ ರಾಧಿಕಾ ಪಂಡಿತ್ ಎಂಟ್ರಿ ಕೊಟ್ಟಿದ್ದು, ಅನೇಕ ಸಿನಿಮಾಗಳಲ್ಲಿ ನಟಿ ಸೈ ಎನಿಸಿಕೊಂಡಿದ್ದಾರೆ.

ಇದನ್ನು ಓದಿ : ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅವಘಡ – ನಾಲ್ವರು ಮೃತ್ಯು, 10 ಮಂದಿಗೆ ಗಾಯ




