Karnataka Weather : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಆರಂಭವಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಆರಂಭವಾಗಿದೆ. ನಗರದ ಹಲವೆಡೆ ಶೀತ ಗಾಳಿ ಜೊತೆ ಮಳೆ ಆರಂಭವಾಗಿದ್ದು, ನಗರಾದ್ಯಂತ ಮೋಡ ಕವಿದ ವಾತಾವರಣವಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವವರಿಗೆ ಮಳೆ ಸಾಥ್ ಕೊಟ್ಟಿದೆ.
ನಗರದಾದ್ಯಂತ ಮಳೆ ಸುರಿಯುತ್ತಿದ್ದು, ಬಸ್ಸು ನಿಲ್ದಾಣಗಳು, ಮೆಟ್ರೋ ನಿಲ್ದಾಣಗಳಲ್ಲಿ ಜನರು ಮಳೆಯಲ್ಲೇ ನಿಲ್ಲುವಂತಾಗಿದೆ. ವಾಹನ ಸಂಚಾರದಲ್ಲೂ ಕೆಲವು ಕಡೆ ತಡವಿಲ್ಲದೇ ಟ್ರಾಫಿಕ್ ಜಾಮ್ ಆಗುತ್ತಿದೆ.
Karnataka Weather : ರಾಜ್ಯಾದ್ಯಂತ ಯೆಲ್ಲೋ ಅಲರ್ಟ್
ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೂ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ಪ್ರಕಟಿಸಿರುವ ಮುನ್ಸೂಚನೆಯಂತೆ, ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಂಭವವಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂಗಾರು ಮಾದರಿಯ ಮಳೆ ನಿರೀಕ್ಷೆಯಿದೆ.
ಇದನ್ನು ಓದಿ : ರಶ್ಮಿಕಾ ಮಂದಣ್ಣ ನಟನೆಯ ಹಾರರ್ ಚಿತ್ರ ‘ಥಮ’ ರಿಲೀಸ್

ಮಲೆನಾಡಿ ಸ್ಪರ್ಶ ಪಡೆದ ಬೆಂಗಳೂರು
ಇನ್ನು ಇಂದು ಬೆಳಗ್ಗೆ ಆರಂಭವಾದ ತುಂತುರು ಮಳೆ ನಲ್ಲದೆ ಮುಂದುವರಿದಿದ್ದು, ಬೆಂಗಳೂರಿಗೆ ಮಲೆನಾಡಿನ ಹವಾಮಾನ ನೀಡಿದೆ. ತಾಪಮಾನದಲ್ಲಿ ಕಳೆಯುಂಟಾಗಿ, ದಟ್ಟ ಮೋಡ ಕವಿದ ವಾತಾವರಣ ನಗರವಾಸಿಗಳಿಗೆ ಹೊಸ ಅನುಭವ ನೀಡುತ್ತಿದೆ.
ಮುಂದಿನ ಮೂರು ದಿನಗಳು ಮಳೆಯೇ?
ಇನ್ನೂ ಮುಂದಿನ 3 ದಿನಗಳವರೆಗೆ ಇದೇ ಮಾದರಿಯ ಮಳೆ ಹಾಗೂ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಅಗತ್ಯವಿದ್ದಾಗ ಮಾತ್ರ ಹೊರ ಹೋಗುವುದು ಹಾಗೂ ಇತರ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲೆಲ್ಲಿ ಮಳೆ?
ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಘೊಷಿಸಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಂತಹ ಗುಡುಗು ಪ್ರದೇಶಗಳ ಜಿಲ್ಲೆಗಳಲ್ಲಿ ಸಂಜೆ ವೇಳೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿಯಲ್ಲಿ ಮಳೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ.

ಇದನ್ನು ನೋಡಿ : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮಳೆ – ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್




