Mandya : ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಕಾಳೇನಹಳ್ಳಿ ಗ್ರಾಮದಲ್ಲಿ ದಂಪತಿಗಳ ಜಗಳ ಭೀಕರ ತಿರುವು ಪಡೆದುಕೊಂಡಿದ್ದು, ಪತಿ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ.
ದೀಪಾವಳಿಯ ಮಧ್ಯೆ ದುಃಖದ ಛಾಯೆ
ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಮಂಗಳವಾರ ತಡರಾತ್ರಿ ಲೋಕೇಶ್ ಹಾಗೂ ಶ್ವೇತಾ (36) ದಂಪತಿಯ ನಡುವೆ ವಿವಾದ ಉಂಟಾಗಿ ಜಗಳಕ್ಕೆ ಕಾರಣವಾಯಿತು. ಈ ಜಗಳದಿಂದಾಗಿ ಆಕ್ರೋಶದಗೊಂಡ ಪತಿ ಲೋಕೇಶ್ ತನ್ನ ಪತ್ನಿ ಶ್ವೇತಾಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಇದನ್ನು ಓದಿ : ಗುರುವಾಯೂರು ದೇವಾಲಯದಲ್ಲಿ ಚಿನ್ನ ನಾಪತ್ತೆ?

ಸ್ಥಳಕ್ಕೆ ಪೊಲೀಸರು ಧಾವನೆ
ಘಟನೆ ಸಂಬಂಧ ಮಾಹಿತಿ ತಿಳಿದ ಕೂಡಲೇ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶ್ವೇತಾಳ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು ಮತ್ತು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಮುಂದಿನ ತನಿಖೆ ಆರಂಭ
ಇನ್ನು ಪೊಲೀಸರು ಈ ಸಂಬಂಧ ಕೇಸ್ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಕೊಲೆಗೆ ನಿಖರವಾದ ಕಾರಣವೇನು ಎಂಬುದು ತನಿಖೆಯಲ್ಲಿ ಬೆಳಕಿಗೆ ಬರುಲಿದೆ. ಇನ್ನು ಈ ದಾರುಣ ಘಟನೆ ಸ್ಥಳೀಯರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ.

ಇದನ್ನು ನೋಡಿ : ಮಂಡ್ಯದಲ್ಲಿ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ




