Badami News : ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರೂರು ಗ್ರಾಮದಲ್ಲಿ ನಡೆದ ಹೃದಯ ವಿದ್ರಾವಕ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಪತಿ ಕಿರುಕುಳದಿಂದ ಬೇಸತ್ತ ಯುವತಿ ತನ್ನ ಮೂರು ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Badami News : ಪತಿ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರೂರು ಗ್ರಾಮದಲ್ಲಿ ನಡೆದ ಹೃದಯ ವಿದ್ರಾವಕ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಪತಿ ಕಿರುಕುಳದಿಂದ ಬೇಸತ್ತ ಯುವತಿ ತನ್ನ ಮೂರು ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೃತರು ಫಾತಿಮಾ (21) ಹಾಗೂ ಪುತ್ರ ಅಬ್ದುಲ್ (3). ಈ ದುರ್ಘಟನೆ ಕೆರೂರು ಪಟ್ಟಣದ ಚೆನ್ನಮ್ಮ ದೇವಿ ದೇವಸ್ಥಾನದ ಬಳಿ ನಡೆದಿದೆ. ಪತಿ ಮಸ್ತಾನ್ ಸಾಬ್ ನಿರಂತರ ಕಿರುಕುಳ ನೀಡುತ್ತಿದ್ದ ಕಾರಣದಿಂದಾಗಿ ತಾಯಿ-ಮಗ ಜೀವ ಮುಗಿಸಿಕೊಂಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಫಾತಿಮಾ ಅವರ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ : ಬೆಳ್ಳಂಬೆಳಗ್ಗೆ ಮಳೆ – ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಪತಿಯ ಕಿರುಕುಳವೇ ಕಾರಣವೇ?
8 ವರ್ಷಗಳ ಹಿಂದೆ ಮಸ್ತಾನ್ ಸಾಬ್ ಜಮೇಲಾ ಎಂಬ ಮಹಿಳೆಯೊಂದಿಗೆ ಮದುವೆಯಾಗಿದ್ದ. ನಂತರ, ಫಾತಿಮಾ ಗರ್ಭಿಣಿಯಾಗಿದ್ದಾಗ ಮಸ್ತಾನ್ ಅವರೊಂದಿಗೆ ಪ್ರೀತಿಸಿ ವಿವಾಹವಾಗಿದ್ದಳು. ಆದರೆ ಮದುವೆಯ ನಂತರ ಅವರ ಜೀವನ ನಿಶ್ಚಲವಾಗಿದ್ದು, ಪತಿ ಕಿರುಕುಳ ಹೆಚ್ಚಾಗಿತ್ತು. ಮೂರು ದಿನಗಳ ಹಿಂದೆ ಫಾತಿಮಾ ತವರಿಗೆ ಬಂದಿದ್ದರೂ, ಮಾನಸಿಕ ಒತ್ತಡದಿಂದ ತಾಯಿ-ಮಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.
ಇದನ್ನು ನೋಡಿ : ಡಿಜೆ ಹಳ್ಳಿ ಇನ್ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಚಿನ್ನು, ಮುದ್ದು ಚಾಟಿಂಗ್ ವೈರಲ್




