DODDABALLAPURA : ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ದಾಬಸ್ ಪೇಟೆ ಹೆದ್ದಾರಿಯ ಮೆಣಸಿ ಗೇಟ್ ಬಳಿ ನಡೆದಿದೆ. ಹೆಸರಘಟ್ಟ ಮೂಲದ ಕನ್ನಯ್ಯ (62) ಮೃತ ಬೈಕ್ ಸವಾರನಾಗಿದ್ದು, ಸರ್ವಿಸ್ ರಸ್ತೆ ಇಲ್ಲದ ಕಾರಣ ಮೆಣಸಿ ಗೇಟ್ ಬಳಿ ಅಪಘಾತಗಳಾಗ್ತಿದೆ ಎಂದು ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

DODDABALLAPURA : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದಾಬಸ್ ಪೇಟೆ ಹೆದ್ದಾರಿ ಮೇಣಸಿ ಗೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇನ್ನು ಹೆಸರಘಟ್ಟ ಮೂಲದ ಕನ್ನಯ್ಯ (62) ಎಂಬುವರು ಮೃತ ದುರ್ದೈವಿಯಾಗಿದ್ದಾರೆ. ಇನ್ನು ಬೈಕ್ ಅನ್ನು ಯೂಟರ್ನ್ ತೆಗೆದುಕೊಳ್ಳುತ್ತಿದ್ದಾಗ, ದಾಬಸ್ ಪೇಟೆ ಕಡೆ ಇಂದ ವೇಗವಾಗಿ ಬರುತ್ತಿದ್ದ ಕಾರು ಅವರ ಬೈಕ್ಗೆ ಡಿಕ್ಕಿ ಹೊಡೆದಿದ್ದು ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ :Draupadi Murmu : ಶಬರಿಮಲೆ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು..!
ಇನ್ನು ಈ ಪ್ರದೇಶದಲ್ಲಿ ಸರ್ವಿಸ್ ರಸ್ತೆಯ ಕೊರತೆಯಿರುವ ಕಾರಣ, ಮೆಣಸಿ ಗೇಟ್ ಬಳಿ ಅಪಘಾತಗಳು ಪದೇಪದೇ ಸಂಭವಿಸುತ್ತಿದ್ದು, ಈ ಬಗ್ಗೆ ಸ್ಥಳೀಯರು ಹಲವು ಬಾರಿ ಎಸ್ಟಿಆರ್ಆರ್ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
MUST WATCH : CAR– BIKE ಕೊಚ್ಚಿಕೊಂಡು ಹೋದ ಕ್ಷಣ ಕ್ಯಾಮೆರಾದಲ್ಲಿ – GUBBIಯಲ್ಲಿ ರೋಚಕ ದೃಶ್ಯಗಳು ವೈರಲ್ | GUBBI NEWS |




