MYSURU : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ಬೆಳಕಿಗೆ ಬಂದಿದ್ದು, ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿಕೊಟ್ಟು ಹತ್ಯೆ ಮಾಡುತ್ತಿದ್ದ ಗ್ಯಾಂಗ್ನ ಕಾರ್ಯಾಚರಣೆ ಪತ್ತೆಯಾಗಿದೆ. ಮೈಸೂರು ತಾಲೂಕಿನ ಹುನಗನಹಳ್ಳಿಯಲ್ಲಿ ಗರ್ಭದಲ್ಲೇ ಶಿಶುಗಳನ್ನು ಕೊಲ್ಲುವ ಗ್ಯಾಂಗ್ (Foeticide gang) ಪತ್ತೆಯಾಗಿದ್ದು, ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಸಂಬಂಧ ಇದೀಗ ಪೊಲೀಸರು (Crime news) ಓರ್ವ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

MYSURU : ಮೈಸೂರು ಜಿಲ್ಲೆಯ ಹುನಗನಹಳ್ಳಿ ಗ್ರಾಮದಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುತ್ತಿದ್ದ ಗ್ಯಾಂಗ್ ವೊಂದು ಪತ್ತೆಯಾಗಿದ್ದು, ರಾಜ್ಯವನ್ನು ಬೆಚ್ಚಿಬೀಳಿಸಿದೆ. ಕಾನೂನು ಬಾಹಿರವಾಗಿ ತೋಟದ ಮನೆಯಲ್ಲಿ ಸ್ಕ್ಯಾನಿಂಗ್ ನಡೆಸಿ, ಹೆಣ್ಣು ಭ್ರೂಣ ಪತ್ತೆಯಾದರೆ ಭ್ರೂಣವನ್ನು ಕೊಲ್ಲುವ ಅಮಾನುಷ ಕೃತ್ಯ ಇಲ್ಲಿ ನಡೆಯುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಇನ್ನು ಈ ಗ್ಯಾಂಗ್ ಗ್ರಾಮೀಣ ಪ್ರದೇಶದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಗರ್ಭಪಾತಕ್ಕಾಗಿ ಮೋಸಮಾಡುತ್ತಿದ್ದ ಈ ಗ್ಯಾಂಗ್ ವಿರುದ್ಧ ಆರೋಗ್ಯ ಇಲಾಖೆ ಹಾಗೂ ಪೊಲೀಸರು ಸಂಯುಕ್ತ ದಾಳಿ ನಡೆಸಿದ್ದಾರೆ. ಆರೋಗ್ಯ ಇಲಾಖೆಯ ಡಿಡಿ ವಿವೇಕ್ ದೊರೈ ಅವರ ನೇತೃತ್ವದಲ್ಲಿ ಮಂಡ್ಯ ಡಿಹೆಚ್ಒ ಮೋಹನ್ ಹಾಗೂ ಮೈಸೂರು ಡಿಹೆಚ್ಒ ಕುಮಾರಸ್ವಾಮಿ ಸೇರಿದಂತೆ ಅಧಿಕಾರಿಗಳ ತಂಡ ದಾಳಿ ನಡೆಸಿ, ಒಬ್ಬ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದೆ.
ಇದನ್ನೂ ಓದಿ : Cinema : ದೀಪಾವಳಿಗೆ ಶಿವರಾಜ್ ಕುಮಾರ್ ಸರ್ಪ್ರೈಸ್! ಹೊಸ ಅವತಾರದಲ್ಲಿ ‘ಕರುನಾಡ ಕಿಂಗ್’
ಇನ್ನು ದಾಳಿ ವೇಳೆ ಲಾಕರ್ನಲ್ಲಿದ್ದ ₹3 ಲಕ್ಷಕ್ಕೂ ಹೆಚ್ಚು ನಗದು, ಭ್ರೂಣ ಹತ್ಯೆಗೆ ಬಳಸುತ್ತಿದ್ದ ಕಿಟ್ಗಳು ಮತ್ತು ಔಷಧಿಗಳು ಪತ್ತೆಯಾಗಿದ್ದು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ದೇ ಸ್ಕ್ಯಾನಿಂಗ್ಗೆ ಬಂದಿದ್ದ ಇಬ್ಬರು ಗರ್ಭಿಣಿಯರನ್ನು ಪೊಲೀಸರು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಇನ್ನು ಅಕ್ರಮ ಸ್ಕ್ಯಾನಿಂಗ್ ಮೂಲಕ ಭ್ರೂಣದ ಲಿಂಗ ಪತ್ತೆಗಾಗಿ ₹25 ಸಾವಿರ ರೂ. ಶುಲ್ಕ ನಿಗದಿಪಡಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಹೆಣ್ಣು ಭ್ರೂಣ ಪತ್ತೆಯಾದರೆ ಗರ್ಭಪಾತ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
MUST WATCH : ಚಿಕ್ಕನಾಯಕನಹಳ್ಳಿಯಲ್ಲಿ ರಣಭೀಕರ ಮಳೆ – ರಸ್ತೆಗಳು ಜಲಾವೃತ, ಜನರು ಹೈರಾಣು | CN HALLI RAIN EFFECT |




